Advertisement

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

03:56 PM Apr 14, 2024 | Team Udayavani |

ಗದಗ: ನಮ್ಮದು ಬಡವರಿಗೆ ಬದುಕು ಕಟ್ಟಿಕೊಡುವ ಪ್ರಣಾಳಿಕೆ. ಶಾಶ್ವತವಾಗಿ ದೇಶವನ್ನು ಕಟ್ಟುವಂತದ್ದು ಮತ್ತು ಬಡತನ ನಿರ್ಮೂಲನೆ ಮಾಡುವುದೇ ನಮ್ಮ ಗುರಿ ಎಂದು ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ನಗರದ ನಗರಸಭೆ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ| ಬಾಬಾಸಾಹೇಬ್ ಅಂಬೇಡ್ಕರ್ ಜನ್ಮದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಹತ್ತು ವರ್ಷದಲ್ಲಿ ಈಗಾಗಲೇ 15 ಕೋಟಿ ಜನರ ಬಡತನ ನಿರ್ಮೂಲನೆಯಾಗಿದೆ. ಇನ್ನೂ 25 ಕೋಟಿ ಜನರ ಬಡತನ ನಿರ್ಮೂಲನೆ ಮಾಡುವ ಗುರಿ ನಮ್ಮ ಪ್ರಣಾಳಿಕೆಯಲ್ಲಿದೆ. ಮೂಲಭೂತ ಸೌಕರ್ಯ, ಮನೆ, ಶೌಚಾಲಯ, ಶಾಶ್ವತವಾಗಿ ಕೊಡುತ್ತೇವೆ ಎಂದರು.

ವಿಶೇಷವಾಗಿ ಸೂರ್ಯ ಘರ್ ಯೋಜನೆಯಡಿ ಸೋಲಾರ್ ಎನರ್ಜಿಯಿಂದ ಉಚಿತ ವಿದ್ಯುತ್ ಪಡೆದು, ವಿದ್ಯುತ್ ಉತ್ಪಾದನೆ ಮಾಡಿ ಮಾರಾಟ ಮಾಡಬಹುದು. ರೈತರಿಗೆ ಅನುಕೂಲವಾಗುವಂತ ಯೋಜನೆ ಮುಂದುವರೆಸಲಾಗಿದೆ. ಹೆಣ್ಣು ಮಕ್ಕಳಿಗೆ ಲಕ್ಷ ಪತಿ ದೀದಿ ಯೋಜನೆಯಿದೆ. ಅದನ್ನು 3 ಕೋಟಿ ಮಹಿಳೆಯರಿಗೆ ವಿಸ್ತರಿಸಲು ಭರವಸೆ ನೀಡಲಾಗಿದೆ. ಇದರಿಂದ ಹೆಣ್ಣು ಮಕ್ಕಳ ಸಬಲೀಕರಣವಾಗುತ್ತದೆ ಎಂದರು.

ಬಿಜೆಪಿ ಪ್ರಣಾಳಿಕೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಜನರ ಜೀವನ ಮಟ್ಟ ಹೆಚ್ಚಳ ಹಾಗೂ ಬಡತನ ನಿರ್ಮೂಲನೆ ಮಾಡುವ ಯೋಜನೆ ನಮ್ಮ ಪ್ರಣಾಳಿಕೆಯಲ್ಲಿವೆ. ಕಾಂಗ್ರೆಸ್ ನವರು ಬೇಕಾಬಿಟ್ಟಿಯಾಗಿ ಘೋಷಣೆ ಮಾಡಿದ್ದಾರೆ. ಅವರಿಗೆ ಜವಾಬ್ದಾರಿ ಇಲ್ಲ. ಯಾಕೆಂದರೆ ಅವರು ಅಧಿಕಾರಕ್ಕೆ ಬರುವುದು ಗ್ಯಾರಂಟಿ ಇಲ್ಲ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬರಲು 272 ಸೀಟ್ ಬೇಕು, ಅವರು ಸ್ಪರ್ಧೆ ಮಾಡಿರುವುದೇ 230 ಕ್ಷೇತ್ರದಲ್ಲಿ ಮಾತ್ರ. ಕಾಂಗ್ರೆಸ್ ಪ್ರಣಾಳಿಕೆ ಬೇಜವಾಬ್ದಾರಿ ಪ್ರಣಾಳಿಕೆ. ನಮ್ಮದು ಜವಾಬ್ದಾರಿಯುತ ಪ್ರಣಾಳಿಕೆ ಎಂದು ಬಸವರಾಜ್ ಬೊಮ್ಮಾಯಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.

Advertisement

ಈ ಸಂದರ್ಭದಲ್ಲಿ ಮಾಜಿ ಸಚಿವ, ಶಾಸಕ ಸಿ.ಸಿ. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ನಗರಸಭೆ ಅಧ್ಯಕ್ಷೆ ಉಷಾ ದಾಸರ ಸೇರಿ ಹಲವು ಮುಖಂಡರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next