Advertisement
ಇಂದಿರಾ ಕ್ಯಾಂಟೀನ್‍ಗೆ ಅನ್ನಪೂರ್ಣ ಹೆಸರಿಡಬೇಕೆಂಬ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಹೇಳಿಕೆಗೆ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದರು.
Related Articles
Advertisement
ಸಚಿವ ಸಂಪುಟದ ಬಗ್ಗೆ ನಿರೀಕ್ಷೆಗಳಿಲ್ಲ: ಹೊಸ ಸಚಿವ ಸಂಪುಟದ ಬಗ್ಗೆ ಯಾವ ಆಶಾ ಭಾವನೆಯೂ ಇಲ್ಲ. ಬಹುತೇಕ ಹಳಬರೇ ಸಂಪುಟದಲ್ಲಿದ್ದಾರೆ. ಹೀಗಾಗಿ ಹೊಸದನ್ನು ನಿರೀಕ್ಷಿಸಲು ಹೇಗೆ ಸಾಧ್ಯ? ಮಂತ್ರಿ ಮಂಡಲದಲ್ಲಿ 13 ಜಿಲ್ಲೆಗಳಿಗೆ ಪ್ರಾತಿನಿಧ್ಯ ಇಲ್ಲ. ಹಳೆಯ ಮೈಸೂರು ಭಾಗಕ್ಕೆ ಅವಕಾಶ ಕಡಿಮೆಯಾಗಿದೆ. ರಾಜ್ಯದಲ್ಲಿ ಶೇ. 24.1 ರಷ್ಟು ದಲಿತರಿದ್ದಾರೆ. ಆದರೆ, ಪರಿಶಿಷ್ಟರಿಗೆ ನಾಲ್ಕು ಸ್ಥಾನ ಮಾತ್ರ ನೀಡಲಾಗಿದೆ. ಭೋವಿಗಳಿಗೆ, ಕೊರಚ, ಕೊರಮರಿಗೆ ಅವಕಾಶ ಕೊಟ್ಟಿಲ್ಲ. ನಾವಿದ್ದಾಗ ಪ್ರಮಖ ಖಾತೆಗಳನ್ನು ಆ ಸಮುದಾಯದವರಿಗೆ ನೀಡಲಾಗಿತ್ತು. ಒಟ್ಟಾರೆ ಸಂಪುಟದಲ್ಲಿ ಪ್ರಾದೇಶಿಕ ಸಮೋತಲನ ಹಾಗೂ ಸಾಮಾಜಿಕ ನ್ಯಾಯಕ್ಕೆ ಅವಕಾಶವೇ ಇಲ್ಲ ಎಂದರು.
ಇಡಿ ದಾಳಿ ಹಿಂದೆ ರಾಜಕೀಯ ದುರುದ್ದೇಶ: ಸಾಮಾನ್ಯವಾಗಿ ಐಟಿ ದಾಳಿಯಾದ ಬಳಿಕ ಅವರ ಶಿಫಾರಸು ಪ್ರಕಾರ ಇಡಿಯವರು ದಾಳಿ ಮಾಡುತ್ತಾರೆ. ಅದು ಆದಾಯ ಮೀರಿ ಆಸ್ತಿ ಗಳಿಸಿದ್ದರೆ, ಅಕ್ರಮವಾಗಿ ಹಣ ವರ್ಗಾವಣೆ ಅಥವಾ ದುರುಪಯೋಗವಾಗಿದ್ದರೆ ಮಾತ್ರ. ಆದರೆ, ಜಮೀರ್ ಅಹಮದ್ ಅವರ ಮನೆಯ ಮೇಲೆ ಇಡಿಯವರು ಏಕಾಏಕಿ ದಾಳಿ ನಡೆಸಿದ್ದಾರೆ. ಇದು ರಾಜಕೀಯ ಪ್ರೇರಿತರ ಹಾಗೂ ಇದರ ಹಿಂದೆ ದುರುದ್ದೇಶ ಅಡಗಿದೆ ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು.
ಜಮೀರ್ ಅಹಮದ್ ಅವರು ಮನೆ ಕಟ್ಟಿದ್ದಾರೆ ಅಷ್ಟೆ. ಹಣ ದುರುಪಯೋಗ ಅಥವಾ ಅಕ್ರಮ ವರ್ಗಾವಣೆ ಎಲ್ಲಿ ಆಗಿದೆ ಎಂದು ಪ್ರಶ್ನಿಸಿದರು.
ಬಿಜೆಪಿಯವರ ಮೇಲೆ ಏಕೆ ದಾಳಿ ನಡೆಯುವುದಿಲ್ಲ. ಅವರೆಲ್ಲ ಬಡವರೇ, ಬಿಪಿಎಲ್ ಕಾರ್ಡುದಾರರೇ? ಕಾಂಗ್ರೆಸ್ಸಿಗರನ್ನೇ ಟಾರ್ಗೆಟ್ ಮಾಡುವುದೇಕೆ? ಜಮೀರ್ ಅಹಮದ್ ಅವರು ನನ್ನ ಆಪ್ತರು. ಅದೇ ರೀತಿ ಹಲವಾರು ಮಂದಿ ನನಗೆ ಆಪ್ತರಿದ್ದಾರೆ. ಬಿಜೆಪಿಯಲ್ಲಿಯೂ ಇದ್ದಾರೆ. ಆದರೆ, ಸ್ನೇಹ ಬೇರೆ, ರಾಜಕೀಯ ಬೇರೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.