Advertisement

ವಿದೇಶಗಳಿಗೆ ಹೋಲಿಸಿದರೆ ನಮ್ಮ ಗ್ರಾಮೀಣ ಪ್ರದೇಶಗಳು ಸೊರಗಿವೆ: ಈಶ್ವರಪ್ಪ

11:39 AM Sep 09, 2019 | Team Udayavani |

ಬೆಳಗಾವಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸ್ಥಾಯಿ ಸಮಿತಿ ಅದ್ಯಕ್ಷರ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಮಾಲೋಚನೆ. ಚಿಂಥನ ಮಂಥನ ಸಭೆಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಂದ ಚಾಲನೆ ದೊರೆಯಿತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಸರಕಾರ ಸಂಕಲ್ಪ ಮಾಡಿದೆ. ವಿದೇಶಗಳಿಗೆ ಹೋಲಿಸಿದರೆ ನಮ್ಮ ಗ್ರಾಮೀಣ ಪ್ರದೇಶಗಳು ಸೊರಗಿವೆ. ಸಂಸ್ಕೃತಿಯ ವಿಷಯದಲ್ಲಿ ನಾವು ಮುಂದೆ ಇದ್ದೇವೆ. ಆದರೆ ಅಭಿವೃದ್ಧಿ ವಿಷಯದಲ್ಲಿ ಇನ್ನೂ ಸುಧಾರಣೆ ಆಗಬೇಕಿದೆ ಎಂದರು. ನೆರೆ ಹಾವಳಿಯಿಂದ ಗ್ರಾಮೀಣ ಪ್ರದೇಶಗಳ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಕುಡಿಯುವ ನೀರಿನ ವ್ಯವಸ್ಥೆ ಹದಗೆಟ್ಟಿದೆ. ಈ ಎಲ್ಲವನ್ನೂ ಪುನರ್ ನಿರ್ಮಾಣ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.‌

ಉತ್ತರ ಕರ್ನಾಟಕದ ಅಭಿವೃದ್ಧಿ ವಿಷಯದಲ್ಲಿ ಸರಕಾರದ ಬಗ್ಗೆ ಇಲ್ಲಿನ ಜನರಲ್ಲಿ ತಾತ್ಸಾರ ಭಾವನೆ ಇದೆ. ಈ ಹಿನ್ನೆಲೆಯಲ್ಲಿ ಉ.ಕ ಭಾಗದ ಸಮಗ್ರ ಅಭಿವೃದ್ಧಿಗೆ ಅನುಕೂಲವಾಗುವಂತೆ ಸುವರ್ಣ ವಿಧಾನಸೌಧದಲ್ಲಿಉ.ಕ ವಿಶೇಷ ಕಚೇರಿಯನ್ನು ಅರಂಭಿಸಲಾಗುವುದು ಎಂದು ಸಚಿವ ಕೆ ಎಸ್ ಈಶ್ವರಪ್ಪ ಪ್ರಕಟಿಸಿದರು.

ಈ ಕಚೇರಿಯ ಆರಂಭಕ್ಕೆ ಎಲ್ಲ ರೀತಿಯ ಸಹಕಾರ ಹಾಗೂ ಸೌಲಭ್ಯಗಳನ್ನು ನೀಡಲಾಗುವದು. ಇದಲ್ಲದೆ ಈ ಭಾಗದ ಅಭಿವೃದ್ಧಿ ಗೆ ಅನುಕೂಲವಾಗುವಂತೆ ಇಲ್ಲಿಯೇ ನಿರ್ಣಯಗಳನ್ನು ತೆಗೆದುಕೊಳ್ಳುವ ಅಧಿಕಾರ ನೀಡಲಾಗುವದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next