Advertisement

ಶ್ರೀಮಂತ ಧಾರ್ಮಿಕ ಪರಂಪರೆಯ ದೇಶ ನಮ್ಮದು

06:24 PM Dec 29, 2021 | Team Udayavani |

ಬೆಟಗೇರಿ: ಭಾರತ ದೇಶ ಅನೇಕ ಜಾತಿ, ಧರ್ಮ, ದೇವರು ಹಾಗೂ ಸಂಸ್ಕೃತಿ, ಸಂಪ್ರದಾಯಗಳ ದೇಶ. ನಾವೆಲ್ಲರೂ ಭಾರತೀಯರು ಎನ್ನುವ ಸಮನ್ವಯ ಭಾವ ನಮ್ಮೆಲ್ಲರಲ್ಲಿರಲಿ. ದೇವರ ಮೇಲೆ ಅಪಾರ ನಂಬಿಕೆ, ಶ್ರದ್ಧೆ, ಭಯ, ಭಕ್ತಿ ಹೊಂದಿದ ಜನರು ಭಾರತದಲ್ಲಿ ಮಾತ್ರ ಇದ್ದಾರೆ. ಹೀಗಾಗಿ  ಭಾರತ ದೇಶ ಶ್ರೀಮಂತ ಧಾರ್ಮಿಕ ಪರಂಪರೆ ಹೊಂದಿದೆ ಎಂದು ಉಜ್ಜಯಿನಿ ಪೀಠದ ಜಗದ್ಗುರು ಸಿದ್ದಲಿಂಗರಾಜ ದೇಶಿಕೇಂದ್ರ ಭಗವತ್ಪಾದರು ಹೇಳಿದರು.

Advertisement

ಗ್ರಾಮದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಆಶ್ರಯದಲ್ಲಿ ಡಿ.27ರಂದು ನಡೆದ 24ನೇ ವರ್ಷದ ಅಯ್ಯಪ್ಪಸ್ವಾಮಿ ಮಹಾಪೂಜೆ, ಉಜ್ಜಯಿನಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಎಲ್ಲಿ ನಾರಿಯರನ್ನು ಪೂಜಿಸುತ್ತಾರೆ, ಗೌರವಿಸುತ್ತಾರೋ ಅಲ್ಲಿ ದೇವತೆಗಳು ಇರುತ್ತಾರೆ ಎಂಬ ಸಂಸ್ಕೃತಿಯನ್ನು ಪ್ರಪಂಚಕ್ಕೆ ಹೇಳಿಕೊಟ್ಟ ದೇಶ ನಮ್ಮದು ಎಂದರು.

ಕೊರೊನಾ ಮತ್ತು ಓಮಿಕ್ರಾನ್‌ ತಡೆಗಟ್ಟಲು ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಸ್ವತ್ಛತೆ, ಸಾಮಾಜಿಕ ಅಂತರ ಕಾಯ್ದಕೊಂಡು ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಅನುಸರಿಸಬೇಕು. 24ವರ್ಷಗಳಿಂದ ಅಯ್ಯಪ್ಪಸ್ವಾಮಿ ಮಹಾಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವ ಸ್ಥಳೀಯ ಸಮಿತಿಯವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಉಜ್ಜಯಿನಿ ಪೀಠದ ಜಗದ್ಗುರುಗಳು ಅಭಿಪ್ರಾಯಿಸಿದರು.

ಮಮದಾಪೂರದ ಮೌನ ಮಲ್ಲಿಕಾರ್ಜುನ ಸ್ವಾಮೀಜಿ, ಸುಣಧೋಳಿಯ ಅಭಿನವ ಶಿವಾನಂದ ಸ್ವಾಮೀಜಿ, ಕೌಲಗುಡ್ಡದ ಸಿದ್ಧಯೋಗಿ ಅಮರೇಶ್ವರ ಮಹಾರಾಜರು, ಕಡಕೋಳದ ಅಭಿನವ ಸಿದ್ದರಾಯ ಅಜ್ಜನವರು ಸಮ್ಮುಖ ವಹಿಸಿ ಮಾತನಾಡಿದರು. ಈರಯ್ಯ ಹಿರೇಮಠ, ಹನುಮಂತ ವಡೇರ, ಮುತ್ತೆಪ್ಪ ವಡೇರ, ಅಯ್ಯಪ್ಪಸ್ವಾಮಿ ಮಾಲಾಧಾರಿ ಗುರುಸ್ವಾಮಿಗಳಾದ ವೀರನಾಯ್ಕ ನಾಯ್ಕರ, ಬಸವರಾಜ ಬೆಟಗೇರಿ ನೇತೃತ್ವ, ಗ್ರಾಪಂ ಉಪಾಧ್ಯಕ್ಷ ಬಸವಂತ ಕೋಣಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಮಾಜಿ ಸದಸ್ಯ ಲಕ್ಷ್ಮಣ ನೀಲನ್ನವರ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಅಯ್ಯಪ್ಪಸ್ವಾಮಿ ಸೇವಾ ಸಮಿತಿ ವತಿಯಿಂದ ಶ್ರೀಗಳು, ಗಣ್ಯರು, ದಾನಿಗಳನ್ನು ಸತ್ಕರಿಸಲಾಯಿತು.

ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗ್ರಾಪಂ, ವಿವಿಧ ಸಂಘ, ಸಂಸ್ಥೆಗಳ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಸದಸ್ಯರು, ಗಣ್ಯರು, ಸಂತರು, ಶರಣರು, ವೀರಭದ್ರೇಶ್ವರ ದೇವರ ಪುರವಂತರು, ನೂರಾರು ಜನ ಅಯ್ಯಪ್ಪಸ್ವಾಮಿ ಮಾಲಾಧಾರಿ ಗುರುಸ್ವಾಮಿಗಳು, ಮಾಲಾಧಾರಿಗಳು, ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಸದಸ್ಯರು, ಭಕ್ತರು ಇದ್ದರು. ಬಸವರಾಜ ಪಣದಿ ಸ್ವಾಗತಿಸಿ, ನಿರೂಪಿಸಿದರು. ರಾಜು ಪತ್ತಾರ ವಂದಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next