Advertisement
ನಗರದ ಗೋಗಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸರ್ವರಿಗೂ ಉದ್ಯೋಗ ಕಾರ್ಯಕ್ರಮ ಮತ್ತು ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದುವರೆಗೂ ಉದ್ಯೋಗದಾತರಿಗೆ ಒಂದು ಸಾಮಾನ್ಯ ಸೂತ್ರದಡಿ ಪ್ರೋತ್ಸಾಹ ಮತ್ತು ಉತ್ತೇಜಕ ಭತ್ಯೆ ಕೊಡಲಾಗುತ್ತಿತ್ತು. ಆದರೆ ಇನ್ನು ಮುಂದೆ ಯಾವ ಸಂಸ್ಥೆಯು ಎಷ್ಟು ಉದ್ಯೋಗಗಳನ್ನು ಸೃಷ್ಟಿಸಿದೆ ಎಂಬುದನ್ನು ಆಧರಿಸಿ ಪ್ರೋತ್ಸಾಹ ಕೊಡಲಾಗುತ್ತದೆ ಎಂದರು.
Related Articles
Advertisement
ಕೌಶಲ್ಯ ಯಾರ ಸ್ವತ್ತೂ ಅಲ್ಲ. ಯುವ ಜನಾಂಗದಲ್ಲಿ ಅಡಗಿರುವ ಕೌಶಲ್ಯವನ್ನು ಗುರುತಿಸಿ ಅದಕ್ಕನುಗುಣವಾಗಿ ಉದ್ಯೋಗ ಒದಗಿಸುವುದು ಈ ಮೇಳದ ಮುಖ್ಯ ಉದ್ದೇಶ. ಬೆಳಗಾವಿಯಲ್ಲಿ ನಡೆದಿರುವ ಈ ಮೇಳದಲ್ಲಿ ಭಾಗವಹಿಸಿರುವ ಪ್ರತಿಷ್ಠಿತ ಕಂಪನಿಗಳು ಈ ಭಾಗದ ಯುವಕ-ಯುವತಿಯರಲ್ಲಿನ ಕೌಶಲ್ಯಕ್ಕನುಗುಣವಾದ ಉದ್ಯೋಗ ಒದಗಿಸುತ್ತಿರುವುದು ಪ್ರಶಂಸನೀಯ ಕಾರ್ಯ ಎಂದರು.
ಮುಖ್ಯವಾಗಿ ಗಡಿ ಜಿಲ್ಲೆಯ ಯುವಕ-ಯುವತಿಯರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಒಳ್ಳೆಯ ಅವಕಾಶ ಇದಾಗಿದ್ದು, ಉತ್ತಮ ಸಂಸ್ಥೆಗಳ ಸಹಯೋಗದೊಂದಿಗೆ ಕೌಶಲ್ಯ ಅಭಿವೃದ್ಧಿ ಇಲಾಖೆ ವತಿಯಿಂದ ಯುವಕರ ಭವಿಷ್ಯ ರೂಪಿಸಲು ಮುಂದಿನ ದಿನಗಳಲ್ಲಿ ಬೆಳಗಾವಿಯಲ್ಲಿ ಇನ್ನೂ ಹೆಚ್ಚು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗುವುದು ಎಂದರು.
ಸರ್ವರಿಗೂ ಉದ್ಯೋಗದ ಸಂಕಲ್ಪ:ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ| ಸಿ.ಎನ್. ಅಶ್ವತ್ಥ್ನಾರಾಯಣ ಮಾತನಾಡಿ, ಪ್ರತಿಯೊಬ್ಬ ವಿದ್ಯಾವಂತರಿಗೂ ಅವರಿಗೆ ಆಸಕ್ತಿ ಇರುವಂತಹ ಉದ್ಯೋಗಗಳೇ ದೊರಕುವಂತಾಗಬೇಕು ಎನ್ನುವುದು ಸರ್ಕಾರದ ಸಂಕಲ್ಪ. ಈ ಹಿನ್ನೆಲೆಯಲ್ಲಿ ಸಕಲರಿಗೂ ಉದ್ಯೋಗ ಕಾರ್ಯಕ್ರಮ ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ಬೆಳಗಾವಿಯನ್ನು ಮಹಾರಾಷ್ಟ್ರದ ಪುಣೆಗಿಂತಲೂ ದೊಡ್ಡ ಮಟ್ಟಕ್ಕೆ ಬೆಳೆಸಲಾಗುವುದು. ಇಲ್ಲಿನ ಜನರು ಉದ್ಯೋಗಕ್ಕಾಗಿ ವಲಸೆ ಹೋಗಬೇಕಿಲ್ಲ. ಕೈಗಾರಿಕಾ ಸಂಪರ್ಕ ಕಾರ್ಯಕ್ರಮದಡಿ ಕೈಗಾರಿಕೆಗಳವರಿಗೂ ತರಬೇತಿ ನೀಡಲಾಗುವುದು ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಅಭಯ ಪಾಟೀಲ ಮಾತನಾಡಿ, ಬೆಳಗಾವಿಯು ಕೌಶಲ್ಯಯುತ ನಾಡಾಗಿದ್ದು ಇಲ್ಲಿನ ಯುವಕ-ಯುವತಿಯರಿಗೆ ಹೆಚ್ಚಿನ ಉದ್ಯೋಗವಕಾಶಗಳ ಸೃಷ್ಟಿಗಾಗಿ ಹೆಚ್ಚಿನ ಕೈಗಾರಿಕೆಗಳು ಬರುವಂತಾಗಬೇಕು. ಈ ಕೈಗಾರಿಕೆಗಳ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದರು. ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಐಟಿ-ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ| ಇ.ವಿ.ರಮಣರೆಡ್ಡಿ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಆಯುಕ್ತರಾದ ಕೆ.ಜ್ಯೋತಿ, ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ, ಐಟಿ-ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್, ಗೋಗಟೆ ತಾಂತ್ರಿಕ ಮಹಾವಿದ್ಯಾಲಯದ ಚೇರ್ಮನ್ ರಾಜೇಂದ್ರ ಬೆಳಗಾಂವಕರ ಇದ್ದರು. ಡಾ| ಎಸ್.ಸೆಲ್ವಕುಮಾರ ಸ್ವಾಗತಿಸಿದರು. ಶಂಕರ ನಿರೂಪಿಸಿದರು.