Advertisement

ಉಪ ಚುನಾವಣೆ ನಾವೇ ಗೆಲ್ಲುತ್ತೇವೆ: ಪರಮೇಶ್ವರ್‌

10:38 AM Mar 10, 2017 | Team Udayavani |

ಬೆಂಗಳೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ತಿಳಿಸಿದ್ದಾರೆ. ಗೃಹ ಇಲಾಖೆಯ ಪೂರ್ವ ನಿಯೋಜಿತ ಕಾರ್ಯಕ್ರಮದ ನಿಮಿತ್ತ ಲಂಡನ್‌ಗೆ ತೆರಳಿರುವ ಅವರು ಅಲ್ಲಿಂದಲೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ರಾಜ್ಯ ಸರ್ಕಾರ ನಾಲ್ಕು ವರ್ಷದಲ್ಲಿ ಮಾಡಿರುವ ಅಭಿವೃದ್ಧಿ ಕಾಮಗಾರಿಗಳೇ ಶ್ರೀರಕ್ಷೆಯಾಗಿದ್ದು, ಮತದಾರರರ ಆರ್ಶೀವಾದ ಕಾಂಗ್ರೆಸ್‌ಗೆ ದೊರೆಯಲಿದೆ ಎಂದು ಹೇಳಿದ್ದಾರೆ.

Advertisement

ಚುನಾವಣೆ ದಿನಾಂಕ ಘೋಷಣೆಯಾಗಿರುವುದರಿಂದ ಶೀಘ್ರವೇ ಪಕ್ಷದ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next