Advertisement

ದಿಲ್ಲಿ ಕೋವಿಡ್ 523ಕ್ಕೆ ಏರಿಕೆ: 330 ಮಂದಿ ನಿಜಾಮುದ್ದೀನ್ ಸಭೆಯಲ್ಲಿ ಭಾಗಿಯಾದವರು

10:35 AM Apr 08, 2020 | Nagendra Trasi |

ನವದೆಹಲಿ: ದೆಹಲಿಯಲ್ಲಿ ಕಳೆದ 24ಗಂಟೆಯಲ್ಲಿ 20 ಕೋವಿಡ್ 19 ಹೊಸ ಪ್ರಕರಣಗಳು ಪತ್ತೆಯಾಗಿದ್ದು ರಾಜಧಾನಿಯಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 523ಕ್ಕೆ ಏರಿದೆ. ಇದರಲ್ಲಿ ನಿಜಾಮುದ್ದೀನ್ ಮರ್ಕಝ್ ತಬ್ಲಿಘಿ ಜಮಾತ್ ನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 330 ಮಂದಿ ಸೇರಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

Advertisement

ಕಳೆದ 24ಗಂಟೆಯ ಅವಧಿಯಲ್ಲಿ ದಿಲ್ಲಿಯಲ್ಲಿ ಕೋವಿಡ್ 19ಗೆ ಒಂದು ಬಲಿಯಾಗಿದ್ದು, ರಾಜಧಾನಿಯಲ್ಲಿ ಒಟ್ಟು ಸಾವಿಗೀಡಾದವರ ಸಂಖ್ಯೆ 7ಕ್ಕೆ ಏರಿದೆ. ಹೊಸದಾಗಿ ಪತ್ತೆಯಾದ 20 ಪ್ರಕರಣಗಳಲ್ಲಿ ಹತ್ತು ಮಂದಿ ತಬ್ಲಿಘಿ ಜಮಾತ್ ನಲ್ಲಿ ಪಾಲ್ಗೊಂಡವರು ಎಂದು ವಿವರಿಸಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೋವಿಡ್ 19 ವೈರಸ್ ಗೆ ಸಂಬಂಧಿಸಿದಂತೆ ಪರೀಕ್ಷೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರ 27ಸಾವಿರ ಪರ್ಸನಲ್ ಪ್ರೊಟೆಕ್ಟಿವ್ ಎಕ್ವಿಪ್ ಮೆಂಟ್ (ಪಿಪಿಇ) ಗೆ ಅನುಮತಿ ನೀಡಿದ್ದು, ಒಂದು ಅಥವಾ ಎರಡು ದಿನಗಳಲ್ಲಿ ಸರಬರಾಜು ಮಾಡುವ ಸಾಧ್ಯತೆ ಇದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next