ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಜೂನ್ 1 ರವರೆಗೆ ಮಧ್ಯಂತರ ಜಾಮೀನು ಪಡೆದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ತಮ್ಮ ಪತ್ನಿ ಸುನೀತಾ ಅವರೊಂದಿಗೆ ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿದರು.
40 ದಿನಗಳ ನ್ಯಾಯಾಂಗ ಬಂಧನದ ನಂತರ ನಿನ್ನೆಯಷ್ಟೇ ತಿಹಾರ್ ಜೈಲಿನಿಂದ ಹೊರಬಂದ ಕೇಜ್ರಿವಾಲ್, ಪಂಜಾಬ್ ಸಹವರ್ತಿ ಭಗವಂತ್ ಮಾನ್, ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮತ್ತು ದೆಹಲಿ ಸಚಿವ ಅತಿಶಿ ಅವರೊಂದಿಗೆ ಸಮಾಲೋಚನೆ ನಡೆಸಿದರು.
ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರು ಇಂದು ಸಂಜೆ ದಕ್ಷಿಣ ದೆಹಲಿ ಹಾಗೂ ಪೂರ್ವ ದೆಹಲಿಯಲ್ಲಿ ಎರಡು ರೋಡ್ ಶೋಗಳನ್ನೂ ನಡೆಸಲಿದ್ದಾರೆ ಅಲ್ಲದೆ ಮಧ್ಯಾಹ್ನ 1 ಗಂಟೆಗೆ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇದಕ್ಕೂ ಮೊದಲು ಪತ್ನಿ ಸುನೀತಾ ಜೊತೆ ಹನುಮಾನ್ ಮಂದಿರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.
ನವದೆಹಲಿಯ ಎಲ್ಲಾ 7 ಲೋಕಸಭಾ ಸ್ಥಾನಗಳಿಗೆ ಮೇ 25 ರಂದು ಮತದಾನ ನಡೆಯಲಿದೆ. ಇದೀಗ ರಾಷ್ಟ್ರವ್ಯಾಪಿ ಚುನಾವಣಾ ಪ್ರಚಾರದಲ್ಲಿ ಕೇಜ್ರಿವಾಲ್ ಅವರನ್ನು ತೊಡಗಿಸಿಕೊಳ್ಳುವ ನಿರೀಕ್ಷೆಯಿದೆ.
ಇದನ್ನೂ ಓದಿ: JDS – BJP ಮೈತ್ರಿ ಮುಂದುವರೆಯುತ್ತೆ, ಅನುಮಾನ ಬೇಡ… ಮೈಸೂರಿನಲ್ಲಿ ಯಡಿಯೂರಪ್ಪ ವಿಶ್ವಾಸ