Advertisement

ಹೊರ ರಾಜ್ಯದ ಮೀನುಗಾರರ ಪ್ರತಿಭಟನೆ

04:10 PM May 10, 2020 | Suhan S |

ಭಟ್ಕಳ: ರಾಜ್ಯದಲ್ಲಿ ಲಾಕ್‌ಡೌನ್‌ ಘೋಷಣೆ ಮಾಡಿದ್ದರಿಂದ ದೂರದ ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯ 100ಕ್ಕೂ ಹೆಚ್ಚು ಮೀನುಗಾರಿಕಾ ಕೂಲಿ ಕಾರ್ಮಿಕರು ಸಂಕಷ್ಟದಲ್ಲಿ ಸಿಲುಕಿದ್ದು, ತಮ್ಮನ್ನು ತಮ್ಮ ರಾಜ್ಯಕ್ಕೆ ಮರಳಿಸುವಂತೆ ಕೋರಿ ಇಲ್ಲಿನ ಮಾವಿನಕುರ್ವೆ ಮೀನುಗಾರಿಕಾ ಬಂದರಿನಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.

Advertisement

ದೂರದ ಪಶ್ಚಿಮ ಬಂಗಾಳ, ಓಡಿಸ್ಸಾ, ಉತ್ತರಾಖಂಡ್‌ ರಾಜ್ಯದಿಂದ ಬಂದು ಬೋಟ್‌ಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು ಕಳೆದ ಸುಮಾರು ಎರಡು ತಿಂಗಳಿನಿಂದ ಕೆಲಸವಿಲ್ಲದೇ ಕಾಲ ಕಳೆಯುತ್ತಿದ್ದಾರೆ.ಬೋಟ್‌ ಮಾಲೀಕರು ಊಟ ತಿಂಡಿಗೆ ವ್ಯವಸ್ಥೆ ಮಾಡಿದ್ದರೂ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆಯಿಲ್ಲ. ಈ ಬಗ್ಗೆ ನಾವು ಈಗಾಗಲೇ ಸ್ಥಳೀಯ ಗ್ರಾಪಂ ಆಡಳಿತಕ್ಕೆ ತಿಳಿಸಿದ್ದರೂ ಏನೂ ಪ್ರಯೋಜನವಾಗಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next