Advertisement
ಸಾವಿರಾರು ರೈತರು ಕಾರ್ಯಕ್ರಮಕ್ಕೆ ಆಗಮಿಸಲಿರುವ ಹಿನ್ನೆಲೆ ಕವಡಿಮಟ್ಟಿ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ರಸ್ತೆ ಇಕ್ಕೆಲಗಳಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸಿ ಸ್ವಾಗತ ಕೋರಲು ವ್ಯವಸ್ಥೆ ಮಾಡಲಾಗಿದೆ. ಸ್ಥಳೀಯ ಗ್ರಾಪಂ ನೂತನ ಆಡಳಿತ ಮಂಡಳಿಯಂತೂ ತುಂಬಾ ಹುಮ್ಮಸ್ಸಿನಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮೂರನ್ನು ರಾಜ್ಯವ್ಯಾಪ್ತಿ ಪ್ರಸಿದ್ಧಗೊಳಿಸಲು ಕಾತುರರಾಗಿದ್ದಾರೆ.
ಕೀಟನಾಶಕ, ಬೀಜ, ಸಬ್ಸಿಡಿ ಕೃಷಿ ಉಪಕರಣಗಳ ಪ್ರದರ್ಶನ ನಡೆಯಲಿದೆ. ಸಮಯಾವಕಾಶ ಇದ್ದರೆ ಕೃಷಿ ಇಲಾಖೆಯ ಸಬ್ಸಿಡಿ ಯೋಜನೆಯಡಿ ಮಂಜೂರಾದ ಕೃಷಿ ಉಪಕರಣಗಳನ್ನು ಫಲಾನುಭವಿಗಳಿಗೆ ವಿತರಿಸಲು ಕೃಷಿ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
Related Articles
ಸಚಿವೆ ಶಶಿಕಲಾ ಜೊಲ್ಲೆಯವರು ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸುವರು. ಶಾಸಕ, ಕರ್ನಾಟಕ ಆಹಾರ ನಿಗಮದ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಅಧ್ಯಕ್ಷತೆ ವಹಿಸುವರು. ಸಂಸದ ರಮೇಶ ಜಿಗಜಿಣಗಿ ಹಸ್ತಪ್ರತಿ ಬಿಡುಗಡೆಗೊಳಿಸುವರು.
Advertisement
ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ, ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಶಾಸಕರಾದ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಬಸನಗೌಡ ಪಾಟೀಲ ಯತ್ನಾಳ, ಯಶವಂತರಾಯಗೌಡ ಪಾಟೀಲ, ಡಾ| ದೇವಾನಂದ ಚವ್ಹಾಣ, ಸೋಮನಗೌಡ ಪಾಟೀಲ, ಎಂಎಲ್ ಸಿಗಳಾದ ಅರುಣ ಶಹಾಪುರ, ಪ್ರಕಾಶ ರಾಠೊಡ, ಹನುಮಂತ ನಿರಾಣಿ, ಸುನೀಲಗೌಡ ಪಾಟೀಲ, ಬೀಜ ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಜಿಪಂ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರತಿಭಾ ಪಾಟೀಲ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಬಿ.ಎಲ್. ಪಾಟೀಲ, ತಾಪಂ ಅಧ್ಯಕ್ಷೆ ಲಕ್ಷ್ಮೀಬಾಯಿ ಹವಾಲ್ದಾರ್, ತಾಪಂ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ, ಜಿಪಂ ಸದಸ್ಯೆ ಪದ್ಮಾವತಿ ವಾಲೀಕಾರ, ತಾಪಂ ಸದಸ್ಯೆ ಕಸ್ತೂರಿಬಾಯಿ ಗುಳಬಾಳ, ಕವಡಿಮಟ್ಟಿ ಗ್ರಾಪಂ ಅಧ್ಯಕ್ಷ ಸಿದ್ರಾಮಯ್ಯ ಗುರುವಿನ್ ಮುಖ್ಯಅತಿಥಿಗಳಾಗಿ ಆಗಮಿಸುವರು. ಕೃಷಿ ಇಲಾಖೆ ರಾಜ್ಯ, ಜಿಲ್ಲಾ ಮಟ್ಟದ ಅಧಿ ಕಾರಿಗಳು, ಕೃಷಿ ವಿವಿಯ ಉಪ ಕುಲಪತಿ ಡಾ| ಎಂ.ಬಿ. ಚೆಟ್ಟಿ ಸೇರಿ ಹಲವರು ವಿಶೇಷ ಆಹ್ವಾನಿತರಾಗಿ ಆಗಮಿಸುವರು. ಶಾಸಕರಿಂದ ಮನವಿ
ಕೃಷಿ ಸಚಿವರ ಕಾರ್ಯಕ್ರಮಕ್ಕೆ ತಾಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಈ ವೇಳೆ ರೈತ ಪರ ಬೇಡಿಕೆಗಳ ಮನವಿಯನ್ನು ಸಚಿವರಿಗೆ ಸಲ್ಲಿಸಿ ಈಡೇರಿಸುವಂತೆ ಮನವಿ ಮಾಡಿಕೊಳ್ಳಲಾಗುತ್ತದೆ. ರೈತರು ಈ ಅವಕಾಶದ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಶಾಸಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಮನವಿ ಮಾಡಿದ್ದಾರೆ.