Advertisement

ಸರ್ಕಾರದ ನಡೆಗೆ ಖಂಡನೆ: ಕುವೆಂಪು ಪ್ರತಿಷ್ಠಾನಕ್ಕೆ ನಾಡೋಜ ಹಂಪನಾ ರಾಜೀನಾಮೆ

02:19 PM May 30, 2022 | Team Udayavani |

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಮತ್ತು ಅವರ ಬರೆದ ನಾಡಗೀತೆಯನ್ನು ಅವಮಾನ ಮಾಡಿದ  ರೋಹಿತ್ ಚಕ್ರತೀರ್ಥ ವಿರುದ್ದ ಕ್ರಮ ಕೈಗೊಳ್ಳದ ಸರ್ಕಾರದ ನಡೆಯನ್ನು ಖಂಡಿಸಿ ಖ್ಯಾತ ಸಾಹಿತಿ ನಾಡೋಜ ಹಂಪನಾಗರಾಜಯ್ಯ ಅವರು ಇಂದು ರಾಷ್ಟ್ರಕವಿ ಕುವೆಂಪು ಪತ್ರಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Advertisement

ಇಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ನಾಡೋಜ ಹಂಪನಾಗರಾಜಯ್ಯ ಅವರು ಅದೇ  ಪತ್ರವನ್ನು ಸುದ್ದಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.

ತಮ್ಮ ಅಮೂಲ್ಯ ಕೃತಿಗಳಿಂದ  ಹೊಸಗನ್ನಡ ಸಾಹಿತ್ಯ ದ  ಎಲ್ಲಾ ಪ್ರಕಾರಗಳನ್ನೂ ಸಪ್ರಾಣಿಸಿ ಭಾರತೀಯ ಸಾಹಿತ್ಯದಲ್ಲಿ  ಕನ್ನಡಕ್ಕೂ ಕರ್ನಾಟಕಕ್ಕೂ ಮಹಾಕವಿ ಕುವೆಂಪುರವರು ಗೌರವ ತಂದರು.  ಅವರು ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದ ಮೊದಲಿಗರು. ಇದನ್ನರಿತು ಸರ್ಕಾರ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾವನ ವನ್ನು ಪ್ರಾರಂಭಿಸಿತಲ್ಲದೆ ಅತ್ಯುನ್ನತ  ಕರ್ನಾಟಕ ರತ್ನ ಪ್ರಶಸ್ತಿಯನ್ನಿತ್ತು ಗೌರವಿಸಿತು.  ಆದರೆ ಇಂದು ಕುವೆಂಪು ರವರನ್ನೂ ಅವರು ಹುಟ್ಟಿದ ಗೌರವಾನ್ವಿತ ದೊಡ್ಡ ಜನಾಂಗವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿ ನಮ್ಮ ರಾಷ್ಟ್ರಗೀತೆಯಾದ ನಾಡಗೀತೆಯನ್ನು  ಲೇವಡಿ ಮಾಡಿದ ವ್ಯಕ್ತಿಯ ಮೇಲೆ ಕ್ರಮಕೈಗೊಳ್ಳುವ  ಬದಲು ಸರ್ಕಾರ ಜವಾಬ್ದಾರಿಯ ಸ್ಥಾನ ನೀಡಿದೆ.  ಇದು ಅಪಾಯಕಾರಿಯಾದ ಬೆಳವಣಿಗೆ. ಇದರಿಂದ ಪುಣ್ಯಶ್ಲೋಕರ  ಮೇಲೆ ಕೆಟ್ಟ ಮಾತುಗಳ ಮಳೆ ಸುರಿಸಿದರೆ  ಅಂಥವರಿಗೆ ಸರಕಾರದ  ಸಮಿತಿಗಳಲ್ಲಿ ಸದಸ್ಯರಾಗುವ ಸದಾವಕಾಶಗಲಿವೆ ಎಂಬ ತಪ್ಪು ಸಂದೇಶ ರವಾನೆ ಮಾಡಿದಂತಾಗಿದೆ ಎಂದು ಹಂಪನಾಗರಾಜಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

ವ್ಯಕ್ತಿಗಳ ತೇಜೋವಧೆ ಮಾಡುವುದನ್ನು  ನಮ್ಮ ಸರಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ. ರಾಷ್ಟ್ರಕವಿ ಕುವೆಂಪುರವನ್ನೂ ನಮ್ಮ ಪವಿತ್ರ ನಾಡಗೀತೆಯನ್ನೂ ಅಪಮಾನಿಸುತ್ತಿದ್ದರೂ  ನೋಡಿಕೊಂಡು ತೆಪ್ಪಗಿರುವುದು  ನನಗೆ ಕಷ್ಟವಾಗಿದೆ. ಸಕಾರ ಸ್ಥಾಪಿಸಿರುವ  ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೂ ಸದಸ್ಯತ್ವಕ್ಕೂ ನನ್ನ ರಾಜೀನಾಮೆಯನ್ನು ಮಾನ್ಯ ಮುಖ್ಯಮಂತ್ರಿಗಳು ಅಂಗೀಕರೀಸಬೇಕೆಂದು  ಹಂಪನಾ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next