ಬಾಗಲಕೋಟೆ: ಅಧಿಕಾರಿಗಳು ಸಿಎಂ, ಎಂಪಿ, ಎಂಎಲ್ಎ, ಜಿಪಂ ಅಧ್ಯಕ್ಷರು ಪರಿಚಯವಿದ್ದಾರೆ ಎಂದು ಭಾವಿಸಿಕೊಂಡು ತಮ್ಮ ಇಲಾಖೆ ಕಾರ್ಯಕ್ರಮದ ಪ್ರಗತಿಯಲ್ಲಿ ಬೇಜವಾಬ್ದಾರಿ ತೋರಿದ್ದೀರಿ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಎಚ್ಚರಿಸಿದರು.
ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿ ಕಾರ್ಯ ಜವಾಬ್ದಾರಿಯಿಂದ ಮಾಡಬೇಕು. ಅಪೂರ್ಣ ಮಾಹಿತಿಯೊಂದಿಗೆ ಸಭೆಗೆ ಬಂದು ತಪ್ಪು ಮಾಹಿತಿ ನೀಡಿ ಕರ್ತವ್ಯದಿಂದ ನುಣುಚಿಕೊಳ್ಳುತ್ತಿದೀರಿ. ಎಂಎಲ್ಎ, ಎಂಪಿ, ಸಿಎಂ ಪರಿಚಯವಿದ್ದಾರೆ ಎಂದು ತಿಳಿದುಕೊಂಡಿದ್ದರೆ ತಪ್ಪು. ಯಾರ ಪ್ರಭಾವಕ್ಕೂ ಒಳಗಾಗುವದಿಲ್ಲ. ಬೇಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಗೆ ಬರುವಾಗ ಸಂಪೂರ್ಣ ಮಾಹಿತಿಯೊಂದಿಗೆ ಪೂರ್ವ ತಯಾರಿಯಲ್ಲಿ ಬರಬೇಕು. ಸಭೆಯಲ್ಲಿ ಕೇಳಿದ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರ ನೀಡಬೇಕು. ಕೇಳಿದ ಮಾಹಿತಿಗೆ ಹಾರಿಕೆ ಉತ್ತರ ನೀಡುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಜಿಪಂ ಪ್ರತಿಯೊಂದು ಸಭೆಗೆ ಸಂಬಂಧಿಸಿದ ಪ್ರಗತಿಯ ಮಾಹಿತಿ ಸಭೆಯ ಒಂದು ವಾರದ ಪೂರ್ವದಲ್ಲಿ ಜಿಪಂ ಸದಸ್ಯರಿಗೆ ಮಾಹಿತಿ ತಲುಪಿಸುವ ವ್ಯವಸ್ಥೆಯಾಗಬೇಕು ಎಂದು ಸೂಚಿಸಿದರು.
ಜಿಲ್ಲಾ ಮಟ್ಟದ ಅಧಿಕಾರಿ ಆಸಕ್ತಿಯಿಂದ ಕೆಲಸ ನಿರ್ವಹಿಸಬೇಕು. ಮಧ್ಯಾಹ್ನ 3 ರಿಂದ 5 ಗಂಟೆವರೆಗೆ ಸಾರ್ವಜನಿಕರ ಭೇಟಿಗೆ ಅವಕಾಶ ಕಲ್ಪಿಸಬೇಕು. ಈ ಸಮಯದಲ್ಲಿ ಸಾರ್ವಜನಿಕರ ದೂರು, ಅಹವಾಲು ಆಲಿಸುವ ಕಾರ್ಯವಾಗಬೇಕು ಎಂದು ಸೂಚಿಸಿದರು.
Advertisement
ಮಂಗಳವಾರ ನವನಗರದ ಜಿಪಂ ಸಭಾಭವನದಲ್ಲಿ ನಡೆದ ಜಿಪಂ ಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.
Related Articles
Advertisement
ಮುಂದಿನ ಸಭೆಗೆ ಬರುವಾಗ ಕಳೆದ ಸಾಲಿನ ಮಾಹಿತಿಯೊಂದಿಗೆ ಸಮಗ್ರ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು. ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬಾಯಕ್ಕ ಮೇಟಿ ಸೂಚಿಸಿದರು.
ಜಿಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಉಪ ಕಾರ್ಯದರ್ಶಿ ವಿ.ಎಸ್. ಹಿರೇಮಠ ಇದ್ದರು.
ಕೃಷಿ ಹೊಂಡ ಪರಿಶೀಲನೆಗೆ ಕೇಂದ್ರ ತಂಡ:
ಜಿಲ್ಲೆಯಲ್ಲಿ ಜಲಶಕ್ತಿ ಅಭಿಯಾನದಡಿ ರೈತರ ಹೊಲಗಳಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಲಾಗುತ್ತಿದೆ. ಈ ಅಭಿಯಾನದ ಪರಿಶೀಲನೆಗಾಗಿ ಕೇಂದ್ರದಿಂದ 3 ಜನ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಈಗಾಗಲೇ ಜಿಲ್ಲೆಗೆ ಆಗಮಿಸಿ ಜಿಲ್ಲೆಯಲ್ಲಿ ಜಲಶಕ್ತಿಗಾಗಿ ಕೈಗೊಂಡ ಕಾರ್ಯಕ್ರಮಗಳ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ತೋಟಗಾರಿಕೆ ಹಾಗು ಕೃಷಿ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. •ಗಂಗೂಬಾಯಿ ಮಾನಕರ, ಜಿ.ಪಂ. ಸಿಇಒ