ಚೆನ್ನೈ/ಬೆಂಗಳೂರು: “ತಮಿಳುನಾಡಿ ನಲ್ಲಿ ಟ್ರೈನಿಂಗ್ ಪಡೆದು ಬೆಂಗಳೂರಿಗೆ ಬಂದು ಬಾಂಬ್ ಇಡುತ್ತಾರೆ’ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆಯು ಸೋಷಿ ಯಲ್ ಮೀಡಿಯಾದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಪ್ರತಿಪಕ್ಷ ನಾಯಕ ಪಳನಿಸ್ವಾಮಿ ಅವರು ಈ ಹೇಳಿಕೆಯನ್ನು ಖಂಡಿಸಿದ್ದಾರೆ.
ಹನುಮಾನ ಚಾಲೀಸಾ ಪ್ರಕರಣ ಸಂಬಂಧ ಹಿಂದೂ ಯುವಕನ ಮೇಲೆ ಹಲ್ಲೆ ನಡೆದಿದ್ದನ್ನು ಖಂಡಿಸಿ, ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದಾಗ ಶೋಭಾ ಅವರು, ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಉಲ್ಲೇಖೀಸಿ, ತಮಿಳುನಾಡು ವಿರುದ್ಧ ಆರೋಪ ಮಾಡಿದ್ದರು. ಈ ಹೇಳಿಕೆಯು ಆಕ್ರೋಶಕ್ಕೆ ಕಾರಣವಾಗುತ್ತಿ ದ್ದಂತೆ ಶೋಭಾ ಅವರು, “ನನ್ನ ಹೇಳಿಕೆ ಯಿಂದ ನೋವಾಗಿದ್ದರೆ ಕ್ಷಮೆಕೋರು ತ್ತೇನೆ’ ಮತ್ತೆ ಟ್ವೀಟ್ ಮಾಡಿದ್ದಾರೆ.
ತ.ನಾಡು ಸಿಎಂ ಹೇಳಿದ್ದೇನು?: “ಶೋಭಾ ಅವರ ಬೇಜವಾ ಬ್ದಾರಿ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಬಿಜೆಪಿಯ ಈ ವಿಭಜನಕಾರಿ ಮಾತುಗಳನ್ನು ಕನ್ನಡಿಗರು ಮತ್ತು ತಮಿಳರು ಸಂಪೂರ್ಣವಾಗಿ ತಿರಸ್ಕರಿಸಲಿ ದ್ದಾರೆ. ಶಾಂತಿ, ಸೌಹಾರ್ದ ಮತ್ತು ರಾಷ್ಟ್ರೀಯ ಐಕ್ಯತೆಗೆ ಭಂಗ ಉಂಟು ಮಾಡುತ್ತಿರುವ ಶೋಭಾ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿ ಸುತ್ತೇನೆ. ಚುನಾವಣಾ ಆಯೋಗವು ಈ ದ್ವೇಷ ಭಾಷಣದ ಬಗ್ಗೆ ಕೂಡಲೇ ಗಮನ ಹರಿಸಿ, ಕಠಿಣ ಕ್ರಮಕ್ಕೆ ಮುಂದಾಗಬೇಕು’ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.
ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದೇನು? :
ಬೆಂಗಳೂರು: ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ಯುತ್ತಿದ್ದ ವೇಳೆ ಸುದ್ದಿಗಾರರ ಜೊತೆಗೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ತಮಿಳು ನಾಡಿನಿಂದ ಬಂದವರು ಬಾಂಬ್ ಇಡುತ್ತಾರೆ, ದೆಹಲಿಯಿಂದ ಬಂದವರು ಪಾಕಿಸ್ತಾನದ ಪರ ಘೋಷಣೆ ಕೂಗುತ್ತಾರೆ, ಕೇರಳದಿಂದ ಬಂದವರು ಆ್ಯಸಿಡ್ ಹಾಕುತ್ತಾರೆ. ಅವರ ವಿರುದ್ಧ ಕ್ರಮ ಆಗಲಿಲ್ಲ. ಹಿಂದೂಗಳಿಗೆ ಅನ್ಯಾಯ ಆಗುತ್ತಿದೆ. ಹನುಮಾನ ಚಾಲೀಸಾ ಸಿಡಿ ಹಾಕಿದ ಯುವಕನ ಮೇಲೆ ದೌರ್ಜನ್ಯ ನಡೆಯುತ್ತಿದ್ದರೆ ಕಾಂಗ್ರೆಸ್ ಸರ್ಕಾರ ಏನು ಮಾಡುತ್ತಿದೆ. ಕಾನೂನು ಸುವ್ಯವಸ್ಥೆಯ ಮೇಲೆ ಹಿಡಿತ ಇಲ್ಲ. ತಕ್ಷಣ ಗೃಹ ಸಚಿವ ಪರಮೇಶ್ವರ್ ಅವರು ರಾಜೀನಾಮೆ ನೀಡಬೇಕು. ಅಲ್ಪಸಂಖ್ಯಾತ ಓಲೈಕೆಗಾಗಿ ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವುದಕ್ಕೆ ಇದೊಂದು ಉದಾಹರಣೆ. ಸಿದ್ದರಾಮಯ್ಯ ಅವರು ಏಕೆ ಸುಮ್ಮನಿದ್ದೀರಿ ಎಂದು ಪ್ರಶ್ನಿಸಿದರು.