Advertisement
ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಮಧ್ಯಾಹ್ನ 12ರ ವೇಳೆಗೆ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಮುಳಗುಂದ ನಾಕಾ ಮಾರ್ಗವಾಗಿ ಸಾಗಿತು. ಇದೇ ವೇಳೆ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು.
Related Articles
Advertisement
ಸರಕಾರದ ಈ ಕ್ರಮದಿಂದ ರೈತ ಕುಟುಂಬಗಳು ಬೀದಿಗೆ ಬರಬೇಕಾಗುತ್ತದೆ. ರೈತರ ಹಿತದೃಷ್ಟಿಯಿಂದ ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು. ನಗರ ಮತ್ತು ಗ್ರಾಮೀಣ ಭಾಗದಲ್ಲಿರುವ ಪರಿಹಾರ ತಾರತಮ್ಯ ಸರಿಪಡಿಸಬೇಕು. ಭೂಸ್ವಾಧೀನ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸಬೇಕು. ಅಲ್ಲದೇ, ಜಿಂದಾಲ್ ಕಂಪನಿಗೆ 3667 ಎಕರೆ ರೈತರ ಭೂಮಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೀವು ಯಾವ ಸೀಮೆ ರೈತನ ಮಗ ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.
ವಿಜಯಕುಮಾರ ಸುಂಕದ ಮಾತನಾಡಿ, ಏಳು ವರ್ಷಗಳಿಂದ ಸತತ ಬರಗಾಲ ಎದುರಿಸುತ್ತಿರುವ ಕಾರಣ ಆಹಾರ ಉತ್ಪಾದನೆ ಕಡಿಮೆಯಾಗುತ್ತಿದೆ. ಬಾಕಿ ಇರುವ ಬರಪರಿಹಾರ ಒದಗಿಸಬೇಕು. ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ಕೈಬಿಟ್ಟು, ಜಿಂದಾಲ್ ಕಂಪನಿಗೆ ಭೂ ಮಾರಾಟ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಬಳಿಕ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ರೈತ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಕುಸುಮಾ ಜಾಧವ, ವಿಠಲ ಜಾಧವ, ವಿಜಯಕುಮಾರ ಸುಂಕದ, ಶರೀಫ್ ನಮಾಜಿ, ರಾಜು ಬಾಳಿಕಾಯಿ, ರವಿ ಒಡೆಯರ, ಗಂಗಾಧರ ಮೇಟಿ, ಮುತ್ತಪ್ಪ ಆರೇರ, ಶರಣಪ್ಪ ಇನಾಮತಿ, ಶಿವಕ್ಕ ಬಾವಿ, ಅನುಸೂಯಾ ಬಾವಿ, ಗಿರಿಜವ್ವ ಅಸೂಟಿ, ಯಲ್ಲವ್ವ ಕಾಕನೂರ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಮುಖ ಬೇಡಿಕೆ:
ರೈತರಿಗೆ ಕೊಡುವ ಪರಿಹಾರ ನಗರ ಮತ್ತು ಗ್ರಾಮೀಣ ಭಾಗದ ಮಾರುಕಟ್ಟೆ ದರಕ್ಕಿಂತ ನಾಲ್ಕು ಪಟ್ಟು ಇರಬೇಕು. ಭೂಸ್ವಾಧೀನ ಸಂಪೂರ್ಣವಾಗಿ ಸಾರ್ವಜನಿಕ ಉದ್ದೇಶಗಳಿಗೆ ಸೀಮಿತವಾಗೊಳಿಸಬೇಕು. ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಯಡಿ ನ್ಯಾಯಾಧಿಕರಣದಲ್ಲಿ 13.42 ಟಿಎಂಸಿ ನೀರು ಹಂಚಿಕೆಯಾಗಿದ್ದು, ಕೂಡಲೇ ಕೇಂದ್ರ ಸರಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿ, ಯೋಜನೆ ಪೂರ್ಣಗೊಳಿಸಬೇಕು. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಅವ್ಯವಹಾರವನ್ನು ಸರಿಪಡಿಸಿ, ನೇರವಾಗಿ ರೈತರ ಖಾತೆಗಳಿಗೆ ಹಣ ಜಮಾ ಮಾಡಬೇಕು. ಮಹದಾಯಿ ಹೋರಾಟದಲ್ಲಿ ರೈತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.