Advertisement

ಹತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಲು ಆಗ್ರಹ

05:25 PM Oct 06, 2020 | Suhan S |

ಚಿಕ್ಕಮಗಳೂರು; ಉತ್ತರ ಪ್ರದೇಶ ಹತ್ರಾಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಧಿಕಾರಿ ಡಾ| ಬಗಾದಿ ಗೌತಮ್‌ ಮೂಲಕ ಉತ್ತರ ಪ್ರದೇಶ ಸರ್ಕಾರಕ್ಕೆ ಸೋಮವಾರ ಮನವಿ ಸಲ್ಲಿಸಿದರು.

Advertisement

ಹತ್ರಾಸ್‌ನಲ್ಲಿ ನಡೆದಿರುವ ದಲಿತ ಯುವತಿಯ ಮೇಲಿನ ಅತ್ಯಾಚಾರವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಯುವತಿಯ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ಮತ್ತು ಅತ್ಯಾಚಾರ ಹೆಣ್ಣು ಕುಲಕ್ಕೆ ಮಾಡಿದ ಘೋರ ಅಪಮಾನವಾಗಿದೆ. ಇಂತಹ ನೀಚ ಕೃತ್ಯ ಮಾಡಿರುವವರನ್ನು ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕೆಂದು ಒತ್ತಾಯಿಸಿದರು.

ಬಿಜೆಪಿ ನಗರ ಮಂಡಲ ಅಧ್ಯಕ್ಷ ಮಧುಕುಮಾರ್‌ ರಾಜ್‌ ಅರಸ್‌, ಜಿಲ್ಲಾ ವಕ್ತಾರ ವರಸಿದ್ಧಿ ವೇಣುಗೋಪಾಲ್‌, ಜಿಲ್ಲಾ ಉಪಾಧ್ಯಕ್ಷ ಸಿ.ಆರ್‌. ಪ್ರೇಮ್‌ ಕುಮಾರ್‌, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂದೀಪ್‌ ಹಾಗೂ ಯುವ ಮೋರ್ಚಾ ಪದಾಧಿಕಾರಿಗಳಾದ ರಾಜೇಶ್‌ ಕಲೊªಡ್ಡಿ, ಜಸಂತಾ ಅನಿಲ್‌ಕುಮಾರ್‌, ವಿಶಾಖಾ, ಬಸವರಾಜ್‌, ಕೇಶವ ಹಿರೇಮಗಳೂರು ಇದ್ದರು.

ಯುಪಿ ಸರ್ಕಾರ ವಜಾಕೆ ಆಗ್ರಹ :

ಶೃಂಗೇರಿ: ಉತ್ತರ ಪ್ರದೇಶದಲ್ಲಿ ನಿರಂತರ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣ ಮತ್ತು ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೂಡಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ನೇತೃತ್ವದ ಸರಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸಬೇಕು ಎಂದು ಬಿಎಸ್ಪಿ ಜಿಲ್ಲಾ ಉಪಾಧ್ಯಕ್ಷ ಕೆ.ಎಂ. ಗೋಪಾಲ್‌ ಹೇಳಿದರು.

Advertisement

ಪಟ್ಟಣದ ಸಂತೆ ಮಾರುಕಟ್ಟೆ ಬಳಿ ಉತ್ತರಪ್ರದೇಶದಲ್ಲಿ ಯುವತಿ ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿ ಅಮಾನುಷವಾಗಿ ಹತ್ಯೆ ಮಾಡಿದ ಘಟನೆಯನ್ನು ವಿರೋಧಿಸಿ ಬಿಎಸ್ಪಿ ಕಾರ್ಯಕರ್ತರು ಸೋಮವಾರ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.ಉತ್ತರ ಪ್ರದೇಶದಲ್ಲಿ ಕೇಸರಿ ಪೊಲೀಸರು ಕರ್ತವ್ಯದಲ್ಲಿದ್ದು, ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಆದಿತ್ಯನಾಥ್‌ ಸರಕಾರವು ಸಂತ್ರಸ್ತೆ ಶವವನ್ನು ಗೌರವಯುತವಾಗಿ ಸಂಸ್ಕಾರ ಮಾಡಲು ಕುಟುಂಬಕ್ಕೆ ಅವಕಾಶ ನೀಡದಿರುವುದು ಹಾಗೂ ಪೊಲೀಸರು ಯಾರಿಗೂ ತಿಳಿಯದಂತೆ ಶವವನ್ನು ಸುಟ್ಟು ಹಾಕಿ ಸಾಕ್ಷé ನಾಶ ಮಾಡಿದ್ದಾರೆ. ಸರಕಾರವು ಪರೋಕ್ಷವಾಗಿ ಇಂತಹ ಘಟನೆಗಳಲ್ಲಿ ಅಪರಾಧಿಗಳಿಗೆ ರಕ್ಷಣೆ ನೀಡುತ್ತಿರುವುದು ದುರಾದೃಷ್ಟಕರ ಎಂದರು.

ಬಹುಜನ ಪಕ್ಷದ ಕೆ.ಎಂ. ರಾಮಣ್ಣ ಮಾತನಾಡಿ, ಈ ಘಟನೆಯ ನಂತರ ಉತ್ತರ ಪ್ರದೇಶದಲ್ಲಿ ಇದೇ ತರಹದ ಘಟನೆಗಳು ಬಲರಾಂಪುರ ಮತ್ತು ಇತರ ಕಡೆ ಮರುಕಳಿಸುತ್ತಿರುವುದು ಸರಕಾರ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂಬುದನ್ನು ತೋರಿಸುತ್ತದೆ ಎಂದರು. ಹಾಗಲಗಂಚಿ ವೆಂಕಟೇಶ್‌

ಮಾತನಾಡಿ, ಸಾಕ್ಷ್ಯ ನಾಶ ಮಾಡಿರುವ ಜಿಲ್ಲಾಡಳಿತ ಪೊಲೀಸ್‌ ಇಲಾಖೆಯನ್ನು ಹೊಣೆಯಾಗಿಸಿ ಸಂಬಂಧಪಟ್ಟ ಅಧಿಕಾರಿಗಳನ್ನು ಸೇವೆಯಿಂದ ವಜಾ ಮಾಡಿ ಬಂಧಿ ಸಿ ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ಸಂತ್ರಸ್ತ ಕುಟುಂಬಗಳಿಗೆ ಶೀಘ್ರ ನ್ಯಾಯದಾನ ದೊರೆಯುವಂತೆ ಮಾಡಬೇಕು ಎಂದರು.

ಉತ್ತರಪ್ರದೇಶ ಸರಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಪ್ರತಿಭಟನೆಯಲ್ಲಿ ಮಹಿಳಾಮನೆಯ ಅನಿತಾ, ಗಂಡಘಟ್ಟ ದಿನೇಶ್‌, ಶೇಖರ್‌, ಸುಖೇಶ್‌, ಸೀನ, ಶೀಲಾ, ಮಹೇಶ್‌, ಗುರುಪ್ರಸಾದ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next