Advertisement

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

12:48 PM May 29, 2024 | Team Udayavani |

ಬಳ್ಳಾರಿ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣ ಮತ್ತು ಅಧೀಕ್ಷಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ವಿರುದ್ಧ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

Advertisement

ಟೈರ್ ಗೆ ಬೆಂಕಿ‌ ಹಚ್ಚುವ ಮೂಲಕ ಬಳ್ಳಾರಿಯ ರಾಯಲ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಭ್ರಷ್ಟ ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು.

ರಾಯಲ್ ವೃತ್ತದಲ್ಲಿ ಮಾನವ ಸರಪಳಿ ಮಾಡಿ ಆಕ್ರೋಶ ಹೊರಹಾಕಿದರು. ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು ಬಾಯಿ ಬಡೆದುಕೊಂಡು ಪ್ರತಿಭಟನೆ ನಡೆಸಿದರು.

ಆತ್ಮಹತ್ಯೆ ಮಾಡಿಕೊಂಡಿರುವ ನಿಗಮದ ಲೆಕ್ಕಾಧಿಕಾರಿ ಚಂದ್ರಶೇಖರ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು. ಭ್ರಷ್ಟಾಚಾರದ ಲೂಟಿ ಹೊಡೆದವರ್ಯಾರು? ನೈತಿಕ ಹೊಣೆ ಹೊತ್ತು‌ ಮೊದಲು ರಾಜೀನಾಮೆ ನೀಡಿ ಎಂದು ಆಗ್ರಹಿಸಿದರು.

ಪರಿಷತ್ ಸದಸ್ಯ ರವಿ ಕುಮಾರ, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next