Advertisement

ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗೆ ಆಕ್ರೋಶ

02:59 PM Jan 04, 2020 | Suhan S |

ಶಿವಮೊಗ್ಗ: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಭಾರತೀಯ ಮಜ್ದೂರ್‌ ಸಂಘ (ಬಿಎಂಎಸ್‌) ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ನಂತರ ಡಿಸಿ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಿತು.

Advertisement

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಕಾಯ್ದೆಗಳಿಂದ ದೇಶಾದ್ಯಂತ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆರ್ಥಿಕ ಕುಸಿತದಿಂದ ಅಭಿವೃದ್ಧಿಯೇ ಕುಂಠಿತವಾಗಿದೆ. ಕಾರ್ಮಿಕರನ್ನು ನಿರ್ಲಕ್ಷ್ಯದಿಂದ ನೋಡಲಾಗುತ್ತಿದೆ. ಕಾರ್ಮಿಕರಿಲ್ಲದೆ ದೇಶವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅಭಿವೃದ್ಧಿಯೂ ಆಗುವುದಿಲ್ಲ. ಪರ್ಯಾಯ ಆರ್ಥಿಕ ನೀತಿಗಳನ್ನು ನಮ್ಮ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ಬಗೆಹರಿಸಬೇಕು. ಗ್ರಾಮೀಣ ಭಾಗದ ಅಂಚೆ ಕಾರ್ಮಿಕರನ್ನು ನೌಕರರೆಂದು ಪರಿಗಣಿಸಬೇಕು. ಹೊಸ ಉದ್ಯೋಗ ಸೃಷ್ಟಿಸಬೇಕು, ಹಾಲಿ ಉದ್ಯೋಗಗಳ ಕಡಿತಗೊಳಿಸಬಾರದು. ಬೀಡಿ ಕಾರ್ಮಿಕರಿಗೆ ತೆರಿಗೆ ವಿನಾಯಿತಿ ನೀಡಬೇಕು. ಪಿಎಫ್‌ ಮತ್ತು ಇಎಸ್‌ಐ ಸೌಲಭ್ಯ ಕಲ್ಪಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಸಂಘಟನೆಯ ರಾಜ್ಯ ಕಾರ್ಯದರ್ಶಿ ಎಚ್‌.ಎಲ್‌. ವಿಶ್ವನಾಥ್‌, ಜಿಲ್ಲಾಧ್ಯಕ್ಷ ಯೋಗೀಶ್‌ ಪೈ, ಸುಂದರೇಶ್‌, ಕೆ.ಆರ್‌. ನಾಗರಾಜ್‌, ಚಂದ್ರಶೇಖರ್‌, ನಾಗೇಶ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next