Advertisement

ಕಂದಾಯ ಇಲಾಖೆ ಸಿಬ್ಬಂದಿ ವರ್ತನೆಗೆ ಆಕ್ರೋಶ

06:18 PM Dec 04, 2021 | Team Udayavani |

ಬ್ಯಾಡಗಿ: ಜನರ ಸಮಸ್ಯೆ ಕುರಿತಂತೆ ಪ್ರಶ್ನಿಸಿದ ಶಾಸಕರ ಆಪ್ತ ಸಹಾಯಕನ ವಿರುದ್ಧ ಸುಳ್ಳು ಆರೋಪ ಮಾಡಿರುವ ಕಂದಾಯ ಇಲಾಖೆ ಸಿಬ್ಬಂದಿ ವರ್ತನೆ ಖಂಡಿಸಿ ತಾಲೂಕಿನ ವಿವಿಧ ಗ್ರಾಮಗಳ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಪಟ್ಟಣದಲ್ಲಿ ಶುಕ್ರವಾರ ಬೃಹತ್‌ ಪ್ರತಿಭಟನೆ ನಡೆಸಿದರು.

Advertisement

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ತಹಶೀಲ್ದಾರ್‌ ಸೇರಿದಂತೆ ಕಚೇರಿ ಸಿಬ್ಬಂದಿಯನ್ನು ಕೂಡಲೇ ಸಾಮೂಹಿಕ ವರ್ಗಾವಣೆ ಮಾಡುವಂತೆ ಆಗ್ರಹಿಸಿ ತಹಶೀಲ್ದಾರ್‌ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಗುರುವಾರವಷ್ಟೇ ತಹಶೀಲ್ದಾರ್‌ ಕಚೇರಿ ಸಿಬ್ಬಂದಿ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದಲ್ಲದೇ, ಜಿಲ್ಲಾ ಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಇದರಿಂದ ಆಕ್ರೋಶಗೊಂಡ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಶುಕ್ರವಾರ ತಹಶೀಲ್ದಾರ್‌ ಕಚೇರಿ ಸಿಬ್ಬಂದಿ ವಿರುದ್ಧ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪಟ್ಟಣದ ಪಿಕಾರ್ಡ್‌ ಬ್ಯಾಂಕ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಹಶೀಲ್ದಾರ್‌ ಕಚೇರಿ ತಲುಪಿತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಕಂದಾಯ ಇಲಾಖೆ ಅಧಿ ಕಾರಿಗಳು, ಸಿಬ್ಬಂದಿ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ತಡಸ ಗ್ರಾಮದ ಚಂದ್ರಪ್ಪ ದೊಡ್ಮನಿ, ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿರುವ ಅ ಧಿಕಾರಿಗಳು ಮತ್ತು ಸಿಬ್ಬಂದಿ ಮಳೆ ಬೆಳೆ ಹಾನಿ ಫಲಾನುಭವಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದ ಶಾಸಕರ ಆಪ್ತ ಸಹಾಯಕನ ವಿರುದ್ಧ ತಿರುಗಿ ಬಿದ್ದಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಪುರಸಭೆ ಸದಸ್ಯ ಸುಭಾಸ ಮಾಳಗಿ ಮಾತನಾಡಿ, ಉಪ ತಹಶೀಲ್ದಾರ್‌ ಗಣೇಶ್‌ ಕಟ್ಟಿಮನಿ ಅವರನ್ನು ಕೂಡಲೇ ಎತ್ತಂಗಡಿ ಮಾಡುವಂತೆ ಆಗ್ರಹಿಸಿದರು. ಶಾಸಕರ ಆದೇಶದ ಮೇರೆಗೆ ಆಪ್ತ ಸಹಾಯಕ ಬಸವರಾಜ ಕುಲಕರ್ಣಿ ಅವರು ಜನರ ಕೆಲಸಗಳನ್ನು ಸರಿಯಾಗಿ ನಿರ್ವಹಿಸಿ ಎಂದು ಹೇಳಿದ್ದನ್ನೇ ತಪ್ಪಾಗಿ ಬಿಂಬಿಸಿರುವುದು ಖಂಡನೀಯ ಎಂದರು.

ದ್ಯಾಮನಗೌಡ ಪೂಜಾರ ಮಾತನಾಡಿ, ಸ್ಥಳೀಯ ಶಾಸಕರ ಆಪ್ತ ಸಹಾಯಕ ಬಸವರಾಜ ಕುಲಕರ್ಣಿ ಅವರು ರಾತ್ರಿ ವೇಳೆ ಕಚೇರಿಗೆ ಬಂದು ಗುಂಡಾವರ್ತನೆ ತೋರಿದ್ದಾರೆಂಬುದು ಸತ್ಯಕ್ಕೆ ದೂರವಾದ ಮಾತು. ಇದೆಲ್ಲ ಕಟ್ಟು ಕತೆ ಎಂದರಲ್ಲದೇ ಕಂದಾಯ ಇಲಾಖೆ ಸಿಬ್ಬಂದಿಯನ್ನು ಸಾಮೂಹಿಕವಾಗಿ ಕೆಲಸದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.

Advertisement

ನಂತರ ಪ್ರತಿಭಟನಾಕಾರರು ತಹಶೀಲ್ದಾರ್‌ ಮೂಲಕ ಜಿಲ್ಲಾ ಧಿಕಾರಿಗೆ ಮನವಿ ಸಲ್ಲಿಸಿದರು. ಸುರೇಶ ಯತ್ನಳ್ಳಿ, ಶಂಕ್ರಣ್ಣ ಮಾತನವರ, ವೀರೇಶ ಅಂಗಡಿ, ಪುರಸಭೆ ಸದಸ್ಯರಾದ ಶಿವರಾಜ ಅಂಗಡಿ, ಹನುಮಂತಪ್ಪ ಮ್ಯಾಗೇರಿ, ಚಂದ್ರಣ್ಣ ಶೆಟ್ಟರ್‌, ಸುರೇಶ ಉದ್ಯೋಗಣ್ಣನವರ, ಬಸವರಾಜ ಆಣೂರ, ಬಸವರಾಜ ಸಂಕಣ್ಣವರ, ಜಿತೇಂದ್ರ ಸುಣಗಾರ, ಬಸವರಾಜ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next