ಮಳವಳ್ಳಿ: ಶಾಲೆಯಲ್ಲಿ 370 ವಿದ್ಯಾರ್ಥಿಗಳಿದ್ದರೂ ಕೂಡ ಹೆಚ್ಚುವರಿ ಶಿಕ್ಷಕರಿದ್ದಾರೆಂದು ಆಂಗ್ಲ ಶಿಕ್ಷಕರನ್ನು ವರ್ಗಾಯಿಸಿರುವುದನ್ನು ಖಂಡಿಸಿ ಕಿರುಗಾವಲು ಸರ್ಕಾರಿ ಪ್ರೌಡಶಾಲೆಯ ನೂರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ವರ್ಗಾವಣೆ ರದ್ದು ಪಡಿಸಬೇಕೆಂದು ಒತ್ತಾಯಿಸಿದರು.
ಮುಖ್ಯಮಂತ್ರಿಗೆ ವಿದ್ಯಾರ್ಥಿಗಳ ಮನವಿ: ಮುಖ್ಯಮಂತ್ರಿಗಳು ಸರ್ಕಾರಿ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ಎಲ್ಲಾ ವಿದ್ಯಾರ್ಥಿಗಳಿಗೂ ಸಿಗಬೇಕೆಂದು ಹೇಳುತ್ತಾರೆ. ಆದರೆ,ಸರ್ಕಾರಿ ಶಾಲೆಯಲ್ಲಿ ಸಮರ್ಪಕ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ, ಇಂಗ್ಲಿಷ್ ಶಿಕ್ಷಕರ ಕೊರೆತೆಯಿಂದ ಗುಣಾತ್ಮಕ ಶಿಕ್ಷಣ ಸಿಗುತ್ತಿಲ್ಲವೆಂಬುವುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ. ಸಮರ್ಪಕ ಶಿಕ್ಷಕರನ್ನು ನೇಮಿಸುವಂತೆ ಒತ್ತಾಯಿಸಿ ನಿರಂತರ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಎಚ್ಚರಿಸಿದರು. ಕರ್ನಾಟಕದ ಪಬ್ಲಿಕ್ ಶಾಲೆಗಳಿಗೆ 50 ಮಕ್ಕಳಿಗೆ ಒಬ್ಬ ಶಿಕ್ಷಕ, ಆದರ್ಶ ಶಾಲೆಯಲ್ಲಿ 40 ವಿದ್ಯಾರ್ಥಿಗಳಿಗೆ ಒಬ್ಬರು, ಆದರೆ ಸರ್ಕಾರಿ ಶಾಲೆಗಳಲ್ಲಿ 70 ಮಕ್ಕಳಿಗೆ ಒಬ್ಬ ಶಿಕ್ಷಕರನ್ನು ನೇಮಿಸುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ವಿಧಾನಸೌಧಕ್ಕೆ ಮುತ್ತಿಗೆ: ಕಿರುಗಾವಲು ಶಾಲೆಯಲ್ಲಿ 370 ವಿದ್ಯಾರ್ಥಿಗಳಿದ್ದು ಒಬ್ಬ ಶಿಕ್ಷಕರು ಹೇಗೆ ಪಾಠ ಮಾಡಲು ಸಾಧ್ಯ, ಸಂವಿಧಾನದಲ್ಲಿ ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಆಗಿದ್ದರೂ ಕೂಡ ಸರಿಯಾದ ಶಿಕ್ಷಣ ಸಿಗುತ್ತಿಲ್ಲ . ಮುಖ್ಯಮಂತ್ರಿಗಳು ಸಮಸ್ಯೆ ಕೂಡಲೇ ಬಗೆಹರಿಸಬೇಕು. ಇಲ್ಲದಿದ್ದರೇ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ವಿದ್ಯಾರ್ಥಿನಿಯೊಬ್ಬಳು ಮುಖ್ಯ ಮಂತ್ರಿ ಕುಮಾರಸ್ವಾಮಿ ಅವರಿಗೆ ಎಚ್ಚರಿಕೆ ನೀಡಿದ್ದಾಳೆ.
ಸ್ಥಳಕ್ಕೆ ಕ್ಷೇತ್ರ ಸಮನ್ವಯ ಅಧಿಕಾರಿ ಯೋಗೇಶ್ ಮನವಿ ಸ್ವೀಕರಿಸಿ ಮಾತನಾಡಿ, ಮೇಲ್ಮಟ್ಟದ ಅಧಿಕಾರಿಗಳ ಜೊತೆ ಚರ್ಚೆಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.
Advertisement
ತಾಲೂಕಿನ ಕಿರುಗಾವಲು ಫ್ರೌಡಶಾಲೆಯಲ್ಲಿ ಹೆಚ್ಚುವರಿ ಶಿಕ್ಷಕರಾಗಿದ್ದ ಪರಿಮಳ ಅವರನ್ನು ಇತ್ತೀಚಿಗೆ ಬೇರೆಡೆಗೆ ಸರ್ಕಾರ ವರ್ಗಾವಣೆ ಮಾಡ ಲಾಗಿದೆ. ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದರೂ ಕೂಡ ಶಿಕ್ಷಕರನ್ನು ಬೇರೆಡೆಗೆ ನೇಮಿಸಿರುವುದು ಸರಿಯಲ್ಲ ಎಂದು ಖಂಡಿಸಿದರು.
Related Articles
ಇಂಗ್ಲಿಷ್ ಶಿಕ್ಷಕರ ನೇಮಿಸಿ:
ರಾಜ್ಯದಲ್ಲಿ ಒಂದೇ ಸರ್ಕಾರ ಆಗಿದ್ದರಿಂದ ಎಲ್ಲಾ ಶಾಲೆಗಳಿಗೂ ಒಂದೇ ನೀತಿ ಅನ್ವಯವಾಗಬೇಕು, ಆದರೆ, ಸರ್ಕಾರ ಒಂದೇ ಆದರೂ ಶಿಕ್ಷಣ ಕ್ಷೇತ್ರದಲ್ಲಿ ಮೂರು ನೀತಿಗಳಿವೆ, ಗ್ರಾಮೀಣ ಪ್ರದೇಶದಿಂದ ಬರುವ ಮಕ್ಕಳಿಗೆ ಇಂಗ್ಲಿಷ್ ಭಾಷೆ ಕಷ್ಟವಾಗಿದ್ದು, ಇಂಗ್ಲಿಷ್ ಕಲಿಯಲು ಇಂಗ್ಲಿಷ್ ಶಿಕ್ಷಕರನ್ನು ನೇಮಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
Advertisement