Advertisement

ಗ್ರಾಪಂ ಕಾರ್ಯವೈಖರಿಗೆ ಆಕ್ರೋಶ

02:44 PM Dec 01, 2018 | Team Udayavani |

ಸೈದಾಪುರ: ಇಲ್ಲಿನ ಸಾರ್ವಜನಿಕ ಗ್ರಂಥಾಲಯ ಸ್ಥಳಾಂತರಿಸುವಂತೆ ಈಗಾಗಲೇ ಮನವಿ ಸಲ್ಲಿಸಿದರೂ ಕ್ರಮ ಕೈಗೊಳ್ಳಲು ಅಭಿವೃದ್ಧಿ ಅಧಿಕಾರಿ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಪಟ್ಟಣದ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಇಲ್ಲಿನ ಗ್ರಾಪಂನಲ್ಲಿ ನ. 5ರಂದು ಗ್ರಂಥಾಲಯ ಸ್ಥಳಾಂತರ ಮಾಡುವಂತೆ ನೀಡಲಾದ ಮನವಿ ಬಗ್ಗೆ ವಿಚಾರಿಸಿದಾಗ ಗ್ರಾಪಂ ಅಭಿವೃದ್ಧಿ ಅಧಿಕಾರಿ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿ ಅವರು ಮೂರು ದಿನದಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ನೀಡಿಲಾದ ಲಿಖೀತ ಭರವಸೆ ದಾಖಲೆಯನ್ನು ಪಡೆದು ಅವರು ಮಾತನಾಡಿದರು. 

ಗ್ರಂಥಾಲಯ ಕಟ್ಟಡ ಶಿಥಿಲಾವ್ಯವಸ್ಥೆಯಲ್ಲಿ ಇದೆ. ಅಲ್ಲದೇ ಸೈದಾಪುರ ಪಟ್ಟಣ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಪ್ರಾಥಮಿಕ, ಪ್ರೌಢ, ಪದವಿ ಸೇರಿದಂತೆ ವೃತ್ತಿ ಶಿಕ್ಷಣದಂತಹ ನೂರಾರೂ ವಿದ್ಯಾರ್ಥಿಗಳು ಇದ್ದಾರೆ. ಅವರುಗಳ ಅನುಕೂಲಕ್ಕೆ ತಕ್ಕಂತೆ ಗ್ರಂಥಾಲಯ ಸ್ಥಳಾಂತರ ಮಾಡಿ ಬಡ ಹಾಗೂ ಹಿಂದುಳಿದ ಮಕ್ಕಳಿಗೆ ಸೌಲಭ್ಯ ಒದುಗುವಂತಾಗಬೇಕು ಎಂದು ದೇವರಾಜ ನಾದ, ಗಂಗಾಧರ ಸ್ವಾಮಿ, ಬಸವರಾಜ ಸ್ವಾಮಿ, ಅಂಬ್ರೇಶಗೌಡ, ಲಿಂಗರಾಜ, ಬಂದೇಶ ಪಾಟೀಲ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.

ಗ್ರಾಪಂ ಅಭಿವೃದ್ಧಿ ಅಧಿಕಾರಿ ಬೇಜವಾಬ್ದಾರಿ ಪಟ್ಟಣದ ನಾಗರಿಕರು ನಿರಂತರವಾಗಿ ಅಧಿಕಾರಿಗೆ ಗ್ರಂಥಾಲಯ ಅವ್ಯವಸ್ಥೆಯ ಬಗ್ಗೆ ಮನವಿ ಸಲ್ಲಿಸುತ್ತಿದ್ದಾರೆ. ಆದರೆ ಅಧಿಕಾರಿ ಗ್ರಂಥಾಲಯಕ್ಕೆ ಮತ್ತು ನನಗೆ ಸಂಭಂದ ಇಲ್ಲದಂತೆ ವರ್ತಿಸುತ್ತಿದ್ದಾನೆ. ಇಂತಹ ಬೇಜವಾರಿ ಅಧಿಕಾರಿ ವಿರುದ್ಧ ಮೇಲಧಿಕಾರಿಗಳು ಕೂಡಲೇ ಕ್ರಮ ಕೈಗೊಳಬೇಕು ಮತ್ತು ಉತ್ತಮ ಗ್ರಂಥಾಲಯದ ವ್ಯವಸ್ಥೆ ಮಾಡಬೇಕು ಎಂಬುವುದು ನಾಗರಿಕರ ಒತ್ತಾಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next