Advertisement

ಹೊರಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ

07:38 AM Feb 07, 2019 | |

ಬೆಂಗಳೂರು: ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಅಡುಗೆ ತಯಾರಕರು ಮತ್ತು ಅಡುಗೆ ಸಹಾಯಕರನ್ನು ನಿವೃತ್ತಿವರೆಗೂ ಸೇವೆಯಲ್ಲಿ ಮುಂದುವರೆಸುವಂತೆ ಒತ್ತಾಯಿಸಿ ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.

Advertisement

ಬುಧವಾರ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವರೆಗೂ ಪ್ರತಿಭಟನಾ ರ್ಯಾಲಿ ನಡೆಸಿದ ಸರ್ಕಾರಿ ವಸತಿ ಶಾಲೆಗಳ ಹೊರಗುತ್ತಿಗೆ ನೌಕರರು, ‘ಸರ್ಕಾರವು ಸುಮಾರು ವರ್ಷಗಳಿಂದ ಹಾಸ್ಟೆಲ್‌ಗ‌ಳಲ್ಲಿ ಅಡುಗೆ ತಯಾರಿಕೆ ಹಾಗೂ ಸಹಾಯಕರನ್ನಾ ಹೊರಗುತ್ತಿಗೆ ಆಧಾರದಲ್ಲಿ ನಮ್ಮನ್ನು ದುಡಿಸಿಕೊಂಡಿದೆ. ಈಗ ಏಕಾಏಕಿ ಸಹಾಯಕರು ಹಾಗೂ ಕಾವಲುಗಾರರ ಹುದ್ದೆಗೆ ಕಾಯಂ ನೇಮಕಾತಿ ಮಾಡಿಕೊಂಡು ಹೊರಗುತ್ತಿಗೆ ನೌಕರರನ್ನು ಕೈಬಿಡುತ್ತಿದೆ. ಈ ಗುತ್ತಿಗೆ ಉದ್ಯೋಗವನ್ನು ನಂಬಿ ಬದುಕುತ್ತಿದ್ದವರನ್ನು ಬೀದಿ ಪಾಲು ಮಾಡಲು ಹೊರಟಿದೆ’ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಸಂಘದ ಅಧ್ಯಕ್ಷ ನಿತ್ಯಾನಂದಸ್ವಾಮಿ ಮಾತನಾಡಿ, ಕಳೆದ ವರ್ಷ ಜೂನ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆರು ತಿಂಗಳೊಳಗಾಗಿ ಬೇಡಿಕೆಗಳನ್ನು ಇತ್ಯರ್ಥಗೊಳಿಸುವ ಭರವಸೆ ನೀಡಿ ಎಲ್ಲಾ ನೌಕರರನ್ನು ಸಮಾಧಾನ ಪಡೆಸಿ ಮತ್ತೆ ಯಥಾಸ್ಥಿತಿ ಹೊರಗುತ್ತಿಗೆ ಸೇವೆಗೆ ಕಳುಹಿಸಿದ್ದರು. ಜತೆಗೆ ಹೊರಗುತ್ತಿಗೆ ಸಿಬ್ಬಂದಿಗಳನ್ನು ಮರಳಿ ಕೆಲಸಕ್ಕೆ ಸೇರಿಸಬೇಕೆಂದು ಹೊರಡಿಸಿದ್ದರು. ಆದರೆ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಅನೇಕ ಹೊರಗುತ್ತಿಗೆ ನೌಕರರನ್ನು ಮುಂದುವರೆಸಿಲ್ಲ ಎಂದು ಬೇಸರ ವ್ಯಕ್ತಪಡೆಸಿದರು.

ಈ ಹಿಂದೆ ಮುಖ್ಯಮಂತ್ರಿಗಳ ಭರವಸೆ ನಂತರ ಹೊರಗುತ್ತಿಗೆ ನೌಕರರು 2018ರ ಜುಲೈ ತಿಂಗಳಿನಿಂದ ಕೆಲಸಕ್ಕೆ ಮರು ಹಾಜರಾಗಿದ್ದಾರೆ. ಇಲ್ಲಿವರೆಗೆ ಏಳು ತಿಂಗಳು ಕೆಲಸ ಮಾಡಿದ್ದಾರೆ. ಆದರೆ, ಆರು ತಿಂಗಳ ಸಂಬಳ ನೀಡಿ ಒಂದು ತಿಂಗಳ ವೇತನವನ್ನು ಬಾಕಿ ಉಳಿಸಿಕೊಂಡಿದ್ದಾರೆ. ಕೆಲ ನೌಕರರಿಗೆ ಎರಡು ತಿಂಗಳ ವೇತನ ನೀಡದೆ ಸತಾಯಿಸುತ್ತಿದ್ದಾರೆ ಆರೋಪಿಸಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೊರಗುತ್ತಿಗೆ ಸಿಬ್ಬಂದಿಗಳನ್ನು ಮರಳಿ ಕೆಲಸಕ್ಕೆ ಸೇರಿಸಬೇಕೆಂದು ಹೊರಡಿಸಿರುವ ಆದೇಶ ವನ್ನು ಪರಿಗಣಿಸಿದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮರು ಕೆಲಸಕ್ಕೆ ಸೇರಿಸಿಕೊಂಡು ನಿವೃತ್ತಿ ವಯಸ್ಸಿನವರೆಗೂ ಸೇವೆಯಲ್ಲಿ ಮುಂದುವರೆಸಬೇಕು ಎಂದು ಒತ್ತಾಯಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next