Advertisement

Southfork Dairy Farms ಸ್ಫೋಟ; 18,000 ಕ್ಕೂ ಹೆಚ್ಚು ಹಸುಗಳು ಸಾವು

11:52 AM Apr 14, 2023 | Team Udayavani |

ವಾಷಿಂಗ್ಟನ್: ಸೌತ್‌ಫೋರ್ಕ್ ಡೈರಿ ಫಾರ್ಮ್‌ನಲ್ಲಿ ಸಂಭವಿಸಿದ ಭಾರೀ ಸ್ಫೋಟದಿಂದಾಗಿ ಅದರಲ್ಲಿದ್ದ ಸುಮಾರು 18,000 ಕ್ಕೂ ಹೆಚ್ಚು ಹಸುಗಳು ಸಾವನ್ನಪ್ಪಿರುವ ಭೀಕರ ಘಟನೆ ಅಮೆರಿಕದ ಟೆಕ್ಸಾಸ್‌ ನಲ್ಲಿ ಸಂಭವಿಸಿದೆ.

Advertisement

ಡೈರಿಯಲ್ಲಿ ಸ್ಫೋಟವಾದ ಬೆನ್ನಲ್ಲೇ ಬೆಂಕಿ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ ಹಸುಗಳು ಸಜೀವ ದಹನಗೊಂಡಿವೆ. ಆದರೆ ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಬಗ್ಗೆ ಡೈರಿಯ ಮಾಲಿಕರು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ಧಾವಿಸಿದ್ದು ,ಫಾರ್ಮ್ ನಲ್ಲಿ ಸಿಲುಕಿಕೊಂಡಿದ್ದ ಒಬ್ಬ ವ್ಯಕ್ತಿಯನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಗಾಗಿ ಜಮೀನಿಗೆ ಹೋಗುವ ಎಲ್ಲಾ ರಸ್ತೆಗಳನ್ನು ಬಂದ್‌ ಮಾಡಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next