Advertisement

ಗೋವಾದಲ್ಲಿ ಅಕ್ರಮ ವ್ಯವಹಾರ: 22 ಬಾಂಗ್ಲಾದೇಶಿ ಪ್ರಜೆಗಳ ಬಂಧನ

02:23 PM Sep 25, 2022 | Team Udayavani |

ಪಣಜಿ : ಗೋವಾದ ವಿವಿಧ ಭಾಗಗಳಲ್ಲಿ ಅಕ್ರಮ ವ್ಯವಹಾರ ನಡೆಸುತ್ತಿದ್ದ 22 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ.

Advertisement

ಬಂಧಿತರ ಬಳಿ ಭಾರತೀಯ ವಿಳಾಸ, ಮತದಾರರ ಗುರುತಿನ ಚೀಟಿ ಇರಲಿಲ್ಲ. ಈ ರೀತಿ ಅಕ್ರಮವಾಗಿ ನೆಲೆಸಿರುವ ಹೆಚ್ಚಿನ ಜನರನ್ನು ಹುಡುಕಿ ಅವರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗುವುದಾಗಿ ಗೃಹ ಸಚಿವಾಲಯದ ಸೂಚನೆ ನೀಡಿದೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ವೈದ್ಯ ಸೇರಿ ಇಬ್ಬರು ಮಕ್ಕಳು ಸಜೀವ ದಹನ

ಕಳೆದ ಎರಡು ತಿಂಗಳುಗಳಲ್ಲಿ ವಿದೇಶಿಗರ ಪರಿಶೀಲನೆಯ ಸಂದರ್ಭದಲ್ಲಿ, ಗೋವಾ ಪೊಲೀಸ್‌ನ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ರಾಜ್ಯದಲ್ಲಿ ಅಕ್ರಮವಾಗಿ ತಂಗಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿದೆ.

ಈ ಬಾಂಗ್ಲಾದೇಶಿ ಪ್ರಜೆಗಳು ನಕಲಿ ದಾಖಲೆಗಳನ್ನು ಬಳಸಿಕೊಂಡು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಎಟಿಎಸ್ ಪೊಲೀಸ್ ವರಿಷ್ಠಾಧಿಕಾರಿ ಶೋಭಿತ್ ಸಕ್ಸೇನಾ ಸುದ್ದಿಗಾರರಿಗೆ ತಿಳಿಸಿದ್ದಾರೆ. 4 ರಿಂದ 5 ವರ್ಷಗಳಿಂದ ಇಲ್ಲಿಯೇ ಇದ್ದು, ಕೆಲವರು ಕುಟುಂಬಗಳನ್ನೂ ಇಲ್ಲಿ ಹೊಂದಿದ್ದಾರೆ ಎಂದು ಸಕ್ಸೇನಾ ಹೇಳಿದರು.

Advertisement

ಗೋವಾ ಪೊಲೀಸರು ನಿರಂತರವಾಗಿ ಗಮನಹರಿಸುತ್ತಿದ್ದಾರೆ ಎಂದು ಅವರು ಹೇಳಿದರು. ವಿದೇಶಿಯರಿಗೆ, ವಿಶೇಷವಾಗಿ ಅಕ್ರಮವಾಗಿ ತಂಗುವವರಿಗೆ ಪರಿಶೀಲನೆ ಡ್ರೈವ್‌ಗಳನ್ನು ಸಹ ಮಾಡುತ್ತೇವೆ. ಯಾವುದೇ ದಾಖಲೆಗಳಿಲ್ಲದೆ ವಾಸಿಸುತ್ತಿರುವವರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next