Advertisement

3 ವರ್ಷದಲ್ಲಿ 2 ಸಾವಿರ ಸರ್ಕಾರಿ ಅಧಿಕಾರಿಗಳ ವಿರುದ್ಧ ಸಿಬಿಐ ಕೇಸು

08:09 PM Jul 31, 2023 | Team Udayavani |

ನವದೆಹಲಿ: ಭ್ರಷ್ಟಾಚಾರ ಪ್ರಕರಣ ಸಂಬಂಧಿಸಂತೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಕಳೆದ 3 ವರ್ಷಗಳಲ್ಲಿ 2,000 ಸರ್ಕಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಕಳೆದ ವರ್ಷ ಇಂಥ ಪ್ರಕರಣಗಳ ಸಂಖ್ಯೆ ಶೇ.44ರಷ್ಟು ಹೆಚ್ಚಳವಾಗಿದೆ ಎಂದು ಗೃಹ ಸಚಿವಾಲಯ ಬಿಡುಗಡೆಗೊಳಿಸಿರುವ ವರದಿಯಲ್ಲಿ ತಿಳಿಸಲಾಗಿದೆ.

Advertisement

ಕಾರ್ಪೋರೇಟ್‌ ವ್ಯವಹಾರಗಳ ಸಚಿವಾಲಯದ ಮೂವರು ಅಧಿಕಾರಿಗಳು ಸೇರಿದಂತೆ 4 ಮಂದಿಯನ್ನು ಶನಿವಾರವಷ್ಟೇ ಭ್ರಷ್ಟಾಚಾರ ಆರೋಪದ ಮೇರೆಗೆ ಸಿಬಿಐ ಬಂಧಿಸಿ, ಅವರಿಂದ 60 ಲಕ್ಷ ರೂ.ಗಳವರೆಗಿನ ನಗದನ್ನು ವಶಪಡಿಸಿಕೊಂಡಿತ್ತು. ಈ ಬೆನ್ನಲ್ಲೇ ಸಚಿವಾಲಯದ ಈ ವರದಿ ಬಿಡುಗಡೆಗೊಂಡಿದೆ.

ದತ್ತಾಂಶಗಳ ಪ್ರಕಾರ, ಕಳೆದ 3 ವರ್ಷದಲ್ಲಿ ಪೊಲೀಸರು ಸೇರಿದಂತೆ ಇತರೆ 2,000 ಸಾರ್ವಜನಿಕ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಪೈಕಿ 2020ರಲ್ಲಿ 608 ಮಂದಿ ಪೊಲೀಸರು ಮತ್ತು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಲಾಗಿತ್ತು.

ನಂತರ 2021ರಲ್ಲಿ ಈ ಪ್ರಕರಣಗಳ ಸಂಖ್ಯೆ 582ಕ್ಕೆ ಇಳಿಕೆಯಾಗಿತ್ತು. ಆದರೆ, 2021ರಲ್ಲಿ ಮತ್ತೆ ಹೆಚ್ಚಳ ಕಂಡಿದ್ದು, ಕೇಂದ್ರ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳೂ ಸೇರಿ ಒಟ್ಟು 884 ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next