ಹೊಸದಿಲ್ಲಿ: ಸುಮಾರು 400 ಕ್ಕೂ ಹೆಚ್ಚು ಸಂಸತ್ ಸಿಬ್ಬಂದಿಗೆ ಕೋವಿಡ್ 19 ಸೋಂಕು ದೃಢವಾಗಿದೆ ಎಂದು ವರದಿ ತಿಳಿಸಿವೆ.
ಜನವರಿ 4 ರಿಂದ 8 ರವರೆಗೆ ಸಂಸತ್ತಿನ 1,409 ಸಿಬ್ಬಂದಿಗಳಲ್ಲಿ 402 ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ನಂತರ ಅವರ ಮಾದರಿಗಳನ್ನು ಒಮಿಕ್ರಾನ್ ಪತ್ತೆಗಾಗಿ ಜೀನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗಿದೆ.
“ಜನವರಿ 4-8 ರಿಂದ 402 ಸಿಬ್ಬಂದಿಗೆ ಕೋವಿಡ್ 19 ಸೋಂಕು ದೃಢವಾಗಿದೆ. ಎಲ್ಲಾ ಮಾದರಿಗಳನ್ನು ಒಮಿಕ್ರಾನ್ ರೂಪಾಂತರದ ದೃಢೀಕರಣಕ್ಕಾಗಿ ಜೀನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ಎಎನ್ ಐ ವರದಿ ಮಾಡಿದೆ.
ಇದನ್ನೂ ಓದಿ:ರೈಲಿನಲ್ಲಿ 1.50 ಕೋಟಿ ರೂ. ಮೌಲ್ಯದ ಮಾದಕವಸ್ತು ಸಾಗಾಟ : ಉಗಾಂಡ ಮೂಲದ ಮಹಿಳೆ ಸೆರೆ
ಸಂಸತ್ತಿನ ಉಭಯ ಸದನಗಳ ಹಲವಾರು ಉದ್ಯೋಗಿಗಳು ಕೆಲಸದ ಸಮಯದಲ್ಲಿ ತಮ್ಮ ಸೋಂಕಿತ ಸಹೋದ್ಯೋಗಿಗಳೊಂದಿಗೆ ಸಂಪರ್ಕಕ್ಕೆ ಬಂದ ನಂತರ ಅವರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಲೋಕಸಭೆ ಮತ್ತು ರಾಜ್ಯಸಭೆಯ ವಿವಿಧ ಅಧಿಕಾರಿಗಳು ಕೂಡ ಐಸೋಲೇಶನ್ ಗೆ ಒಳಗಾಗಿದ್ದಾರೆ