Advertisement

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 41.99 ಕೋಟಿ ಲಸಿಕಾ ಡೋಸ್ ಗಳ ಪೂರೈಕೆ : ಕೇಂದ್ರ

02:21 PM Jul 18, 2021 | Team Udayavani |

ನವ ದೆಹಲಿ : ಕೋವಿಡ್ ಸೋಂಕಿನ ಎರಡನೇ ಅಲೆ ಸುಧಾರಸಿಕೊಳ್ಳುತ್ತಿದ್ದಂತೆ ದೇಶದಾದ್ಯಂತ ಲಸಿಕಾ ಅಭಿಯಾನಕ್ಕೆ ಕೇಂದ್ರ ಸರ್ಕಾರ ವೇಗ ನೀಡುತ್ತಿದೆ.

Advertisement

ಈಗಾಗಲೇ ದೇಶದ ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 41.99 ಕೋಟಿ ಲಸಿಕೆಗಳ ಡೋಸ್ ಗಳನ್ನು ಕೇಂದ್ರ ಸರ್ಕಾರದಿಂದ ಪೂರೈಸಲಾಗಿದೆ ಹಾಗೂ 2.56 ಕೋಟಿ ಲಸಿಕೆಗಳ ಡೋಸ್ ಗಳು ಈಗಾಗಲೇ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ : ವಿಡಿಯೋ: ಗಾಯಗೊಂಡ ಆಟಗಾರನನ್ನು ಔಟ್ ಮಾಡದೆ ಕ್ರೀಡಾ ಸ್ಪೂರ್ತಿ ಮೆರೆದ ಜೋ ರೂಟ್ ಪಡೆ

15, 75, 140 ಲಸಿಕೆಗಳ ಡೋಸ್ ಗಳು ದೇಶದ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಪೂರೈಸುವುದಕ್ಕೆ ಸಿದ್ಧವಾಗಿದೆ ಎಂದು ಕೂಡ ಮಾಹಿತಿ ನೀಡಿದೆ.

ಲಸಿಕೆಯನ್ನು ನೀಡಿದ್ದು ಹಾಗೂ ವ್ಯರ್ಥವಾದ ಲಸಿಕೆಗಳನ್ನು ಒಳಗೊಂಡು ಒಟ್ಟು 39,42,97,344 ಲಸಿಕೆಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗಿದೆ ಎಂದು ಭಾನುವಾರ ಬೆಳಿಗ್ಗೆ 8 ಗಂಟೆಗೆ ಲಭ್ಯವಿರುವ ಮಾಹಿತಿಯ ಪ್ರಕಾರ ಸಚಿವಾಲಯ ತಿಳಿಸಿದೆ.

Advertisement

ಕೋವಿಡ್ 19 ಲಸಿಕಾ ಅಭಿಯಾನ ಕಾರ್ಯಕ್ರಮದ ಸಾರ್ವತ್ರಿಕೀಕರಣದ ಹೊಸ ಹಂತವು ಜೂನ್ 21 ರಿಂದ ಪ್ರಾರಂಭವಾಯಿತು.

ಕಾರ್ಯಕ್ರಮದಡಿಯಲ್ಲಿ ಕೇಂದ್ರ ಸರ್ಕಾರವು ಎಲ್ಲಾ ವಯಸ್ಕರಿಗೆ ಉಚಿತವಾಗಿ ಇನಾಕ್ಯುಲೇಷನ್ ಮಾಡಿತು. 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆಗಳು ಉಚಿತವಾಗಿದ್ದವು.

ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದ ಅಡಿಯಲ್ಲಿ, ಭಾರತ ಸರ್ಕಾರವು ಲಸಿಕೆಗಳನ್ನು ನೀಡುವ ಮೂಲಕ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಬೆಂಬಲ ನೀಡುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಕೇಂದ್ರ ಸರ್ಕಾರವು ದೇಶದಲ್ಲಿ ಲಸಿಕೆ ತಯಾರಕರು ಉತ್ಪಾದಿಸುವ ಲಸಿಕೆಗಳಲ್ಲಿ ಶೇಕಡಾ 75 ರಷ್ಟು ರಾಜ್ಯಗಳಿಗೆ / ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಪೂರೈಸುತಯ್ತಿದೆ  ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ : ವಿಡಿಯೋ: ಗಾಯಗೊಂಡ ಆಟಗಾರನನ್ನು ಔಟ್ ಮಾಡದೆ ಕ್ರೀಡಾ ಸ್ಪೂರ್ತಿ ಮೆರೆದ ಜೋ ರೂಟ್ ಪಡೆ

Advertisement

Udayavani is now on Telegram. Click here to join our channel and stay updated with the latest news.

Next