Advertisement
ಇಂದು(ಸೋಮವಾರ, ಜುಲೈ 26) ಬೆಳಗ್ಗಿನವರೆಗಿನ ವರದಿಯ ಪ್ರಕಾರ, ದೇಶದ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರದಿಂದಿ ಉಚಿತವಾಗಿ 45.37 ಕೋಟಿಯಷ್ಟು ಲಸಿಕೆಯ ಡೋಸ್ ಗಳನ್ನು ನೀಡಲಾಗಿದೆ ಎಂದು ತನ್ನ ಪ್ರಕಟಣೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
Related Articles
Advertisement
ಸಂಭಾವ್ಯ ಮೂರನೇ ಅಲೆಯ ನಡುವೆ ಕೇಂದ್ರ ಸರ್ಕಾರ ಲಸಿಕಾ ಅಭಿಯಾನಕ್ಕೆ ವೇಗ ನೀಡುತ್ತಿದ್ದು, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯಕ್ಕನುಗುಣವಾಗಿ ಕೇಂದ್ರ ಸರ್ಕಾರ ಲಸಿಕೆಗಳನ್ನು ಪೂರೈಸುತ್ತಿದೆ. ಮಾತ್ರವಲ್ಲದೇ ಮಕ್ಕಳಿಗೆ ನೀಡುವ ಲಸಿಕಾ ಪ್ರಯೋಗಗಳು ಕೂಡ ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿದ್ದು, ಕೋವಿಡ್ 19 ಸೋಂಕಿನ ವಿರುದ್ಧ ಹೋರಾಟದಲ್ಲಿ ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಇದನ್ನೂ ಓದಿ : ಒಲಿಂಪಿಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಫೆನ್ಸಿಂಗ್ ಪಂದ್ಯದಲ್ಲಿ ಭಾರತಕ್ಕೆ ಗೆಲುವು