ಕಾಬೂಲ್: ಅಫ್ಘಾನಿಸ್ತಾನದ ಮಝಾರ್ ಇ ಷರೀಫ್ ಮಸೀದಿ ಮೇಲೆ ಉಗ್ರರು ಬಾಂಬ್ ಸ್ಫೋಟ ನಡೆಸಿದ ಪರಿಣಾಮ 5ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 65 ಜನರು ಗಾಯಗೊಂಡಿರುವ ಘಟನೆ ಗುರುವಾರ (ಏಪ್ರಿಲ್ 21) ನಡೆದಿದೆ.
ಇದನ್ನೂ ಓದಿ:ಸೋಲಿಲ್ಲದ ಸರದಾರರು ಸಾಕು, ಯುವಕರು ರಾಜಕೀಯಕ್ಕೆ ಬರಬೇಕು : ಭಾಸ್ಕರ್ ರಾವ್
ಟೂಲೂ ನ್ಯೂಸ್ ವರದಿ ಪ್ರಕಾರ, ಉತ್ತರ ಅಫ್ಘಾನ್ ನಗರದ ಶಿಯಾ ಪಂಗಡದ ಮಝಾರ್ ಇ ಷರೀಫ್ ಮಸೀದಿ ಮೇಲೆ ಬಾಂಬ್ ದಾಳಿ ನಡೆಸಿರುವುದು ತಾನೇ ಎಂದು ತಾಲಿಬಾನ್ ನ ಸ್ಥಳೀಯ ಮುಖಂಡನೊಬ್ಬ ಹೊಣೆ ಹೊತ್ತುಕೊಂಡಿರುವುದಾಗಿ ತಿಳಿಸಿದೆ.
ಶಿಯಾ ಮಸೀದಿಯೊಳಗೆ ಸಂಭವಿಸಿರುವ ಬಾಂಬ್ ಸ್ಫೋಟದಲ್ಲಿ 20ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿರುವುದಾಗಿ ತಾಲಿಬಾನ್ ಕಮಾಂಡರ್ ನ ವಕ್ತಾರ ಮೊಹಮ್ಮದ್ ಅಸೀಫ್ ವಾಝೇರಿ ನ್ಯೂಸ್ ಏಜೆನ್ಸಿ ರಾಯಿಟರ್ಸ್ ಗೆ ತಿಳಿಸಿರುವುದಾಗಿ ವರದಿ ಹೇಳಿದೆ.
ಮತ್ತೊಂದೆಡೆ ಪ್ರಾಂತೀಯ ಆರೋಗ್ಯ ಮಂಡಳಿಯ ವಕ್ತಾರ ಝಿಯಾ ಝೆಂಡಾನಿ ಅವರು, ಸ್ಫೋಟದಲ್ಲಿ ಐದಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕವಾಗಿರುವುದಾಗಿ ತಿಳಿಸಿದ್ದಾರೆ.