Advertisement

ವಿಪತ್ತು ಪೀಡಿತ ಪ್ರದೇಶದಲ್ಲಿ ದೇಶದ ಶೇ.50ರಷ್ಟು ಜನ

03:50 AM May 16, 2017 | Team Udayavani |

ನವದೆಹಲಿ: ಪ್ರಾಕೃತಿಕ ವಿಪತ್ತು ಪೀಡಿತ ಪ್ರಮುಖ ದೇಶಗಳ ಪೈಕಿ ಭಾರತವೂ ಒಂದು. ದೇಶದ ಶೇ.50ರಷ್ಟು ಜನರು ಇಂಥ ವಿಕೋಪ ಪೀಡಿತ ಪ್ರದೇಶಗಳಲ್ಲಿ ಬದುಕುತ್ತಿದ್ದಾರೆ. 

Advertisement

ಈ ಮಾಹಿತಿಯನ್ನು ಬಹಿರಂಗಪಡಿಸಿದ್ದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌. ರಾಜ್ಯ ಸರ್ಕಾರಗಳ ನೆರವಿನೊಂದಿಗೆ ಎಲ್ಲಾ ರೀತಿಯ ವಿಕೋಪಗಳನ್ನು ನಿರ್ವಹಣೆ ಮಾಡಲು ಕೇಂದ್ರ ಸರ್ಕಾರ ರೂಪಿಸುತ್ತಿರುವ ಯೋಜನೆಗೆ ಸಂಬಂಧಿಸಿದ ರಾಷ್ಟ್ರಮಟ್ಟದ ಸಭೆ ಉದ್ಘಾಟಿಸಿ ಮಾತನಾಡಿದ ವೇಳೆ ಅವರು ಈ ವಿಚಾರ ತಿಳಿಸಿದ್ದಾರೆ. 

ಸರ್ಕಾರ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಯನ್ನು ಅಳವಡಿ ಸಲು ನಿರ್ಧರಿಸಿದೆ. ಅಲ್ಲದೇ ವಿಪತ್ತುಗಳಿಗೆ ಜಾನುವಾರು ಗಳು ಬಲಿಯಾಗುವುದನ್ನು ತಪ್ಪಿಸಲು ವಿಶ್ವದಲ್ಲೇ ಮೊದಲ ಬಾರಿಗೆ ಜಾನುವಾರು ವಿಕೋಪ ನಿರ್ವಹಣೆ ಯೋಜನೆ ಜಾರಿಗೆ ತರಲಿದ್ದೇವೆ ಎಂದೂ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next