ಕೋಯಿಕ್ಕೋಡ್ : ಸಂಗೀತ ಕಾರ್ಯಕ್ರಮದ ವೇಳೆ ಘರ್ಷಣೆ ಸಂಭವಿಸಿ 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕೋಝಿಕೋಡ್ ಬೀಚ್‌ನಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.
ನಿಧಿ ಸಂಗ್ರಹಕ್ಕಾಗಿ ಕೇರಳದ ಜೆಡಿಟಿ ಇಸ್ಲಾಂ ಕಾಲೇಜು ಆಯೋಜಿಸಿದ್ದ ಸಂಗೀತ ಕಾರ್ಯಕ್ರಮದಲ್ಲಿ ಈ ಘಟನೆ ಸಂಭವಿಸಿದ್ದು, ಕಾರ್ಯಕ್ರಮಕ್ಕೆ ಸಾಗರೋಪಾದಿಯಲ್ಲಿ ಹರಿದು ಬಂದ ಜನರಿಂದ ನೂಕು ನುಗ್ಗಲು ಉಂಟಾಗಿ ಅವಘಡ ಸಂಭವಿಸಿದೆ.
ಘಟನೆಯಲ್ಲಿ ವಿದ್ಯಾರ್ಥಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸ್ಥಳೀಯರು ಸೇರಿ ಹೆಚ್ಚಿನ ಸಂಖ್ಯೆಯಲ್ಲಿ ಗಾಯಗೊಂಡಿದ್ದು, ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕಾರ್ಯಕ್ರಮ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದು ಪೊಲೀಸರಿಗೆ ಜನರನ್ನು ನಿಯಂತ್ರಿಸುವುದು ಕಷ್ಟ ಸಾಧ್ಯವಾಗಿತ್ತು ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಬ್ಯಾರಿಕೇಡ್ ಗಳನ್ನು ಇಟ್ಟು ತಡೆಯೊಡ್ಡಿದ್ದಾರೆ, ಆದರೆ ಜನ ತಡೆಬೇಲಿಯನ್ನೇ ತಳ್ಳಿ ಮುಂದೆ ಸಾಗಲು ಯತ್ನಿಸಿದ್ದಾರೆ ಈ ವೇಳೆ ನೆರೆದಿದ್ದ ಜನ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ, ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ ಇದರಿಂದ ನೂಕು ನುಗ್ಗಲು, ಕಾಲ್ತುಳಿತ ಸಂಭವಿಸಿ ಇಪ್ಪತ್ತಕ್ಕೂ ಹೆಚ್ಚಿನ ಜನರು ಗಾಯಗೊಂಡರು.
ವಾರಾಂತ್ಯದಲ್ಲಿ ಕೋಯಿಕ್ಕೋಡ್ ಬೀಚ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುತ್ತಾರೆ, ಹಾಗಾಗಿ ಇಲ್ಲೇ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ.
ಇದನ್ನೂ ಓದಿ : ಬಂಟ್ವಾಳ : ಹೊಂಡ ತಪ್ಪಿಸಲು ಹಠಾತ್ ಬ್ರೇಕ್ ! ಬಸ್ಸಿನೊಳಗಡೆ ಬಿದ್ದ ಪ್ರಯಾಣಿಕ