ಲಕ್ನೋ: ಒಂದೇ ಕಾರ್ಯಕ್ರಮದಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಮಂದಿ ಅಂಗಾಂಗ ದಾನ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
ಶನಿವಾರ(ಸೆ.16 ರಂದು)ಉತ್ತರ ಪ್ರದೇಶದ ಆಗ್ರಾದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಆರೋಗ್ಯ ಖಾತೆ ರಾಜ್ಯ ಸಚಿವ ಎಸ್ಪಿ ಸಿಂಗ್ ಬಘೇಲ್ ನೇತೃತ್ವದಲ್ಲಿ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ 7,000 ಕ್ಕೂ ಹೆಚ್ಚು ಜನರು ಶನಿವಾರ ತಮ್ಮ ಅಂಗಾಂಗಗಳನ್ನು ದಾನ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
2024 ರ ವೇಳೆಗೆ ಉತ್ತರ ಪ್ರದೇಶದ ಪ್ರತಿ ವೈದ್ಯಕೀಯ ಕಾಲೇಜಿನಲ್ಲಿ ಅಂಗಾಂಗ ದಾನದ ಸೌಲಭ್ಯಗಳು ಲಭ್ಯವಿರುತ್ತವೆ. ವೈದ್ಯಕೀಯ ಕಾಲೇಜುಗಳಲ್ಲಿ ಈ ಸೌಲಭ್ಯವನ್ನು ಸುಧಾರಿಸಲು ಆರ್ಥಿಕ ಸಹಾಯವನ್ನು ಸಹ ಒದಗಿಸಲಾಗುವುದು ಎಂದು ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಈ ವೇಳೆ ಸಚಿವ ಮಾಂಡವಿಯ ಅವರು ಸರೋಜಿನಿ ನಾಯ್ಡು ವೈದ್ಯಕೀಯ ಕಾಲೇಜಿನಲ್ಲಿ ಸೂಪರ್ ಸ್ಪೆಷಾಲಿಟಿ ವಿಭಾಗವನ್ನು ಉದ್ಘಾಟಿಸಿದರು.
ಈ ಸಮಾರಂಭದಲ್ಲಿ ಅಂಗಾಂಗ ದಾನಕ್ಕಾಗಿ ನಾನು ಮತ್ತು ನನ್ನ ಕುಟುಂಬದವರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಆರೋಗ್ಯ ಖಾತೆ ರಾಜ್ಯ ಸಚಿವ ಎಸ್ಪಿ ಸಿಂಗ್ ಬಘೇಲ್ ಹೇಳಿದ್ದಾರೆ.
ಒಂದು ಅಂಗಾಂಗ ದಾನದಿಂದ ಸುಮಾರು ಹತ್ತು ಜನರ ಜೀವ ಉಳಿಸಬಹುದು ಎಂದು ಅಂಗಾಂಗ ದಾನದ ಪ್ರಯೋಜನಗಳ ಬಗ್ಗೆ ಸಮಾಜ ಸೇವಕ ಸಮೀರ್ ಅವರು ಹೇಳಿದ್ದಾರೆ.