ಗುಜರಾತ್: ಗುಜರಿ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗ್ಯಾಸ್ ಸೋರಿಕೆಯಾದ ಪರಿಣಾಮ ಸುಮಾರು 89 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿರುವ ಘಟನೆ ಗುಜರಾತ್‌ನ ಪಾಲನ್‌ಪುರದಲ್ಲಿ ನಡೆದಿದೆ.
ಸಿಲಿಂಡರ್ ಸ್ಫೋಟದ ಬಳಿಕ ಅನಿಲ ಸೋರಿಕೆಯಾಗಿ ಪ್ರದೇಶ ತುಂಬಾ ಹರಡಿದ್ದು ಇದರಿಂದ ಅಲ್ಲಿದ್ದ ಜನರಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು ಆತನಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಕೆಲವರನ್ನು ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದ್ದು ಪ್ರಸ್ತುತ, ಸುಮಾರು 30 ರೋಗಿಗಳು ಇನ್ನೂ ಚಿಕಿತ್ಸೆಯಲ್ಲಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಆಸ್ಪತ್ರೆಗೆ ದಾಖಲಾಗಿರುವ ಎಲ್ಲರೂ ಅಪಾಯದಿಂದ ಪಾರಾಗಿದ್ದು, ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಬನಸ್ಕಾಂತ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಪಾಲನಪುರ ನಗರದ ಮಲನ್ ದರ್ವಾಜಾ ಬಳಿಯ ಪ್ರದೇಶದಲ್ಲಿ ಗ್ಯಾಸ್ ಸೋರಿಕೆಯಾಗಿ ಈ ದುರ್ಘಟನೆ ಸಂಭವಿಸಿದ್ದು ಹೆಚ್ಚಿನ ಜನರು ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: IPL 2024 Qualifier 2: ಫೈನಲ್‌ಗೇರಲು ಹೈದ್ರಾಬಾದ್-ರಾಜಸ್ಥಾನ್ ಸೆಣಸು