Advertisement
ಬುಧವಾರ ಪ್ರಪಂಚದ ಬೇರೆ ಬೇರೆ ರಾಷ್ಟ್ರಗಳಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ 82 ಲಕ್ಷ ದಾಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಜಗತ್ತಿನಾದ್ಯಂತ ಈಗ ಪ್ರತಿನಿತ್ಯ ಒಂದು ಲಕ್ಷಕ್ಕೂ ಅಧಿಕ ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ.
ಅಲ್ಲದೆ 4,46,182 ಮಂದಿ ಮಹಾಮಾರಿ ವೈರಸ್‌ಗೆ ಬಲಿಯಾಗಿದ್ದಾರೆ. ಈ ವರೆಗೆ ಜಗತ್ತಿನಲ್ಲಿ 43,23,083 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 34,96,676 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತರ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ ಅಮೆರಿಕದಲ್ಲಿ ಕೋವಿಡ್ ವೈರಸ್ ಸೋಂಕಿತರ ಪ್ರಮಾಣ ಅತ್ಯಧಿಕವಾಗಿದೆ. ಬುಧವಾರ ಮಧ್ಯಾಹ್ನದ ವೇಳೆಗೆ ಆ ರಾಷ್ಟ್ರದಲ್ಲಿ 22,08,400ಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 1,19,132 ಮಂದಿ ವೈರಸ್‌ಗೆ ಬಲಿಯಾಗಿದ್ದಾರೆ.