ಇಸ್ಲಾಮಾಬಾದ್ : ಪಾಕಿಸ್ತಾನದ ಪೇಶಾವರದ ಮಸೀದಿಯೊಂದರಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ 17 ಮಂದಿ ಸಾವನ್ನಪ್ಪಿದ್ದು ಸುಮಾರು 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪಾಕಿಸ್ತಾನದ ವಾಯುವ್ಯ ನಗರದ ಪೇಶಾವರದಲ್ಲಿರುವ ಮಸೀದಿಯಲ್ಲಿ ಪ್ರಾರ್ಥನೆ ನಡೆಯುತ್ತಿದ್ದಾಗ ಸ್ಫೋಟ ಸಂಭವಿಸಿದ್ದು, ಸ್ಪೋಟದ ತೀವ್ರತೆಗೆ ಮಸೀದಿಯ ಇಂದು ಭಾಗದ ಗೋಡೆ ಕುಸಿದು ಬಿದ್ದಿದೆ ಎನ್ನಲಾಗಿದೆ ಎಂದು ಪೊಲೀಸ್ ಅಧಿಕಾರಿ ಸಿಕಂದರ್ ಖಾನ್ ತಿಳಿಸಿದ್ದಾರೆ.
ಗಾಯಗೊಂಡವರನ್ನು ಪೇಶಾವರದ ಲೇಡಿ ರೀಡಿಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ 13 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಸ್ಫೋಟದ ಕಾರಣವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.
ಸ್ಥಳದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.
ಇದನ್ನೂ ಓದಿ: ಅಮೆರಿಕದ ಉನ್ನತ ನಾಯಕತ್ವದೊಂದಿಗೆ ಅಜಿತ್ ದೋವಲ್ ನಿರ್ಣಾಯಕ ಮಾತುಕತೆ