Advertisement

ಅತಿವೃಷ್ಟಿ: ಹೆಚ್ಚಿನ ಪರಿಹಾರ ಕೋರಲು ಮುಂದಿನ ವಾರ ದೆಹಲಿಗೆ ಸಿ.ಎಂ ಬಿ.ಎಸ್.ಯಡಿಯೂರಪ್ಪ

03:23 PM Aug 25, 2020 | Mithun PG |

ಬೆಳಗಾವಿ:  ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು. ಈ ಸಂಬಂಧ ಶೀಘ್ರದಲ್ಲೇ ಎಲ್ಲ ಶಾಸಕರ ಸಭೆ ಕರೆದು ಎಲ್ಲ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು. ಮುಂದಿನ ವಾರ‌ ದೆಹಲಿಗೆ ಹೋಗಿ ಹೆಚ್ವಿನ ಪರಿಹಾರ ಬಿಡುಗಡೆಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

Advertisement

ಅತಿವೃಷ್ಟಿಗೆ ಸಂಬಂಧಿಸಿದಂತೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಕೋವಿಡ್-19 ಇರುವುದರಿಂದ ಎನ್.ಡಿ‌.ಆರ್.ಎಫ್. ಅನುದಾನದಡಿ ತುರ್ತು ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಹ ನಿರ್ವಹಣೆ ಮತ್ತಿತರ ತುರ್ತು ಕೆಲಸಕ್ಕೆ ಬೆಳಗಾವಿ ಜಿಲ್ಲೆಯಲ್ಲಿ 412 ಕೋಟಿ ರೂಪಾಯಿ ಅನುದಾನ ಲಭ್ಯವಿದೆ.  ಹೆಚ್ಚಿನ ಹಣ ಬೇಕಾದರೆ ತಕ್ಷಣವೇ ಬಿಡುಗಡೆ ಮಾಡಲಾಗುವುದು. ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ 174 ಕೋಟಿ ರೂಪಾಯಿ ಇದೆ. ಇದಲ್ಲದೇ ಉಳಿದಿರುವ ಅನುದಾನದಲ್ಲಿ ರಸ್ತೆ ದುರಸ್ತಿ ಮತ್ತಿತರ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಿದರು.

ಬೆಳಗಾವಿ-ಧಾರವಾಡ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಆಧರಿಸಿ ಮನೆ ಹಾಗೂ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಕಂದಾಯ ಸಚಿವ  ಆರ್.ಅಶೋಕ್ ಮಾತನಾಡಿ ಕಳೆದ ವರ್ಷದ ಮನೆಪರಿಹಾರ ನೀಡುವ ತಂತ್ರಾಂಶ ಪುನಃ ಆರಂಭಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Advertisement

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ,ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಅವರು ಪ್ರವಾಹ‌ ನಿರ್ವಹಣೆ ಮತ್ತು ಪರಿಹಾರ ಕ್ರಮಗಳ ಬಗ್ಗೆ ಮಾತನಾಡಿದರು.

ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಮಾತನಾಡಿ ಜಿಲ್ಲೆಯ ಇನ್ನೂ 9 ಸಾವಿರ ಮನೆಗಳನ್ನು ಪರಿಹಾರದ ಪಟ್ಟಿಗೆ ಸೇರ್ಪಡೆ ಮಾಡಿ ವಿವಿಧ ಕಂತುಗಳ ಬಿಡುಗಡೆ ಮಾಡಲು ಮನವಿ ಮಾಡಿದರು. ವಿಧಾನಸಭೆಯ ಉಪಸಭಾಪತಿ ಆನಂದ ಮಾಮನಿ, ಬೆಳೆವಿಮೆಯಲ್ಲಿ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ನಡುವೆ ಪ್ರತಿವರ್ಷ ವ್ಯತ್ಯಾಸ ಕಂಡುಬರುತ್ತಿದೆ. . ಇದನ್ನು ಸರಿಪಡಿಸಲು ಮನವಿ ಮಾಡಿಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next