Advertisement

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

10:00 PM May 26, 2024 | Team Udayavani |

ಹೊಸದಿಲ್ಲಿ: ಆಸ್ಪತ್ರೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡು ಏಳು ನವಜಾತ ಶಿಶುಗಳು ಸಾವನ್ನಪ್ಪಿದ ಕೆಲವೇ ಗಂಟೆಗಳ ನಂತರ ದೆಹಲಿ ಪೊಲೀಸರು ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯ ಮಾಲಕ ಮತ್ತು ವೈದ್ಯರನ್ನು ಭಾನುವಾರ ಬಂಧಿಸಿದ್ದಾರೆ.

Advertisement

ಪೂರ್ವ ದೆಹಲಿಯ ವಿವೇಕ್ ವಿಹಾರ್‌ನಲ್ಲಿರುವ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯ ಮಾಲಕ ಡಾ.ನವೀನ್ ಖಿಚಿ ಮತ್ತು ಘಟನೆಯ ಸಮಯದಲ್ಲಿ ಆಸ್ಪತ್ರೆಯ ಪಾಳಿಯಲ್ಲಿದ್ದ ಡಾ.ಆಕಾಶ್ (25) ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಹೃದಯ ವಿದ್ರಾವಕ ಘಟನೆಯ ನಂತರ ಆಸ್ಪತ್ರೆಯ ಮಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.ಪ್ರಧಾನಿ ಕಾರ್ಯಾಲಯವು ಏಳು ಶಿಶುಗಳನ್ನು ಕಳೆದುಕೊಂಡ ಸಂತ್ರಸ್ತ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ. ಮತ್ತು ಗಾಯಗೊಂಡ ಶಿಶುಗಳ ಕುಟುಂಬಕ್ಕೆ 50,000 ರೂ. ಪರಿಹಾರವನ್ನು ಘೋಷಿಸಿದೆ.

‘ಘಟನೆ ಹೃದಯವಿದ್ರಾವಕವಾಗಿದೆ. ಅಮಾಯಕ ಮಕ್ಕಳನ್ನು ಕಳೆದುಕೊಂಡವರ ಜತೆ ನಾವೆಲ್ಲರೂ ನಿಂತಿದ್ದೇವೆ. ಘಟನಾ ಸ್ಥಳದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ಸರ್ಕಾರ ಮತ್ತು ಆಡಳಿತ ಅಧಿಕಾರಿಗಳು ನಿರತರಾಗಿದ್ದಾರೆ. ಘಟನೆಗೆ ಕಾರಣಗಳ ಕುರಿತು ತನಿಖೆ ನಡೆಸಲಾಗುತ್ತಿದ್ದು, ಈ ನಿರ್ಲಕ್ಷ್ಯಕ್ಕೆ ಕಾರಣರಾದವರನ್ನು ಬಿಡುವುದಿಲ್ಲ’ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎಕ್ಸ್ ಪೋಸ್ಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next