Advertisement

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

08:17 PM Nov 28, 2021 | Team Udayavani |

ಲಂಡನ್‌: ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತೆ, ಪಾಕಿಸ್ತಾನದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ ಯೂಸುಫ್ ಝೈ ಅವರು ಆಕ್ಸ್‌ಫ‌ರ್ಡ್‌ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ. ಪದವಿ ಪ್ರದಾನದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

Advertisement

ಮಲಾಲಾ ಆಕ್ಸ್‌ಫ‌ರ್ಡ್‌ ವಿವಿಯಲ್ಲಿ ತತ್ವಶಾಸ್ತ್ರ, ಅರ್ಥಶಾಸ್ತ್ರ ಮತ್ತು ರಾಜಕೀಯ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. 2020ರಲ್ಲೇ ವಿದ್ಯಾಭ್ಯಾಸ ಮುಗಿಸಿದ ಅವರಿಗೆ ಆನ್‌ಲೈನ್‌ ಮೂಲಕ ಪದವಿ ಪ್ರದಾನ ಮಾಡಲಾಗಿತ್ತು. ಆ ಕಾರ್ಯಕ್ರಮದಲ್ಲಿ ಅವರು ಸ್ಫೂರ್ತಿದಾಯಕ ಭಾಷಣವನ್ನೂ ಮಾಡಿದ್ದರು.

ಇದೀಗ ಭೌತಿಕವಾಗಿ ಪದವಿ ಪ್ರದಾನ ಕಾರ್ಯಕ್ರಮ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ತನ್ನೊಂದಿಗೆ ಭಾಗಿಯಾಗಿದ್ದ, ಪತಿ, ತಂದೆ, ತಾಯಿ ಹಾಗೂ ಸ್ನೇಹಿತರೊಂದಿಗಿನ ಫೋಟೋಗಳನ್ನು ಮಲಾಲಾ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ.

ಇದನ್ನೂ ಓದಿ : ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಉಸಿರುಗಟ್ಟಿ ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

Advertisement

Udayavani is now on Telegram. Click here to join our channel and stay updated with the latest news.

Next