Advertisement
ಪ್ರಸ್ತುತ ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿದೆ. ಇದರಿಂದಾಗಿ ಹೊಸ ರೋಗಿಗಳು ಆಸ್ಪತ್ರೆಗೆ ಬಂದಾಗ ಅವರಿಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ನೀಡುವುದು ವಿಳಂಬವಾಗಿ ತೀವ್ರ ತೊಂದರೆಯಾಗುತ್ತಿದೆ. ಅಷ್ಟೇ ಅಲ್ಲ, ಆಸ್ಪತ್ರೆಯಲ್ಲಿ ಸ್ಥಳಾಭಾವದಿಂದ ರೋಗಿಗಳಿಗೆ ಅಲ್ಲಿ ಕುಳಿತು ಕಾಯುವುದಕ್ಕೂ ಕಷ್ಟವಾಗುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಉಚಿತವಾಗಿ ಬಸ್ಸಿನಲ್ಲಿಯೇ ತುರ್ತು ಆಕ್ಸಿಜನ್ ಸೌಲಭ್ಯ ಒದಗಿಸಲು ಈ ನೂತನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಸವದಿಯವರು ವಿವರಿಸಿದ್ದಾರೆ.
ಕೆ. ಎಸ್. ಆರ್. ಟಿ. ಸಿ. ಯ ಈ ನೂತನ ಸೇವೆಯನ್ನು ಖಾಸಗಿ ಸಂಸ್ಥೆಗಳಾದ ನಾಯೋನಿಕ ಐ ಕೇರ್ ಟ್ರಸ್ಟ್, ಸಿಟ್ರಿಕ್ ಇಂಡಿಯಾ ಮತ್ತು ಜಿಲ್ಲಾ ಆಡಳಿತಗಳ ಸಹಯೋಗದಿಂದ ಪ್ರಾರಂಭಿಸಲಾಗುತ್ತಿದೆ. ಏಕಕಾಲಕ್ಕೆ ಒಟ್ಟು 8 ಮಂದಿ ರೋಗಿಗಳಿಗೆ ಈ ಬಸ್ಸಿನಲ್ಲಿ ಆಕ್ಸಿಜನ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸವದಿಯವರು ಸ್ಪಷ್ಟಪಡಿಸಿದ್ದಾರೆ. ಚಾಲಕರು ಮತ್ತು ಸಿಬ್ಬಂದಿಗಳಿಗೆ ಸೋಂಕು ಹರಡದಂತೆ ವಿಶೇಷ ವಿನ್ಯಾಸದೊಂದಿಗೆ ಈ ‘ಆಕ್ಸಿಜನ್ ಆನ್ ವ್ಹೀಲ್ಸ್’ ಬಸ್ಸನ್ನು ಸಜ್ಜುಗೊಳಿಸಲಾಗಿದೆಯಲ್ಲದೇ, ಸ್ಯಾನಿಟೈಸರ್, ಮಾಸ್ಕ್ ಗಳನ್ನು ಇದರಲ್ಲಿ ಒದಗಿಸಲಾಗುವುದು. ಪ್ರತಿ ರೋಗಿಗಳೂ ಸಾಮಾನ್ಯವಾಗಿ 2ರಿಂದ 4 ಗಂಟೆಯ ಅವಧಿಯಲ್ಲಿ ಈ ಸೌಲಭ್ಯ ದಿಂದ ತಮಗೆ ಬೇಕಾದ ಅಗತ್ಯ ಪ್ರಮಾಣದ ಆಕ್ಸಿಜನ್ ಪಡೆದುಕೊಳ್ಳಬಹುದಾಗಿದೆ.
Related Articles
Advertisement