Advertisement

ಆಕ್ಸಿಜನ್ ಅಕ್ರಮ ದಾಸ್ತಾನು; ದೆಹಲಿ ಉದ್ಯಮಿ ಕಾಲ್ರಾ ನಿವಾಸ, ಕಚೇರಿ ಮೇಲೆ ಇ.ಡಿ ದಾಳಿ

06:43 PM May 21, 2021 | Team Udayavani |

ನವದೆಹಲಿ: ಆಮ್ಲಜನಕ ಕಾನ್ಸನ್ ಟ್ರೇಟರ್ ಗಳ ಅಕ್ರಮ ದಾಸ್ತಾನು ಮತ್ತು ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ನವನೀತ್ ಕಾಲ್ರಾ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಶುಕ್ರವಾರ(ಮೇ 21) ಶೋಧ ಕಾರ್ಯ ನಡೆಸಿತ್ತು.

Advertisement

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ದೆಹಲಿಯ ಹಲವೆಡೆ ಇ.ಡಿ. ಶೋಧ ಕಾರ್ಯ ನಡೆಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಾವೆ ಕಲೆ ಹಾಕುವ ನಿಟ್ಟಿನಲ್ಲಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿದೆ.

ಮೇ 5ರಂದು ದೆಹಲಿ ಪೊಲೀಸರು ಆಮ್ಲಜನಕ ಕಾನ್ಸನ್ ಟ್ರೇಟರ್ ಗಳ ಅಕ್ರಮ ದಾಸ್ತಾನು ಪ್ರಕರಣದಡಿ ಕಾಲ್ರಾ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು. ಕಾಲ್ರಾಗೆ ಸಂಬಂಧಿಸಿದ ರೆಸ್ಟೋರೆಂಟ್ ಮತ್ತು ಇತರ ಸ್ಥಳಗಳಲ್ಲಿ ದಾಳಿ ನಡೆಸಿದ್ದರು.

ದಾಳಿ ಸಂದರ್ಭದಲ್ಲಿ 500ಕ್ಕೂ ಹೆಚ್ಚು ಆಮ್ಲಜನಕ ಕಾನ್ಸನ್ ಟ್ರೇಟರ್ ಗಳನ್ನು ವಶಕ್ಕೆ ಪಡೆದಿದ್ದರು. ಈ ಆಕ್ಸಿಜನ್ ಅನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದಾಗಿ ಆರೋಪ ಕೇಳಿಬಂದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next