Advertisement

ಹೊನ್ನಾಳಿ, ರೋಣಕ್ಕೆ ತಲಾ 5 ಆಮ್ಲಜನಕ ಸಾಂದ್ರಕ ಹಸ್ತಾಂತರಿಸಿದ ಡಿಸಿಎಂ

08:02 PM May 28, 2021 | Team Udayavani |

ಬೆಂಗಳೂರು: ಕೋವಿಡ್‌ ಸೋಂಕಿತರ ಪಾಲಿಗೆ ಆಪ್ತರಕ್ಷಕನಂತೆ ನೆರವಿಗೆ ಬರುತ್ತಿರುವ ʼಆಮ್ಲಜನಕ ಸಾಂದ್ರಕʼಗಳನ್ನು ಒದಗಿಸುವ ಕೆಲಸ ಮುಂದುವರಿದಿದ್ದು, ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಶುಕ್ರವಾರ ವಿವಿಧ ವಿಧಾನಸಭೆ ಕ್ಷೇತ್ರಗಳಿಗೆ 30 ಸಾಂದ್ರಕಗಳನ್ನು ಹಸ್ತಾಂತರಿಸಿದರು.

Advertisement

ಡಿಸಿಎಂ ಅವರು ವೈಯಕ್ತಿಕ ನೆಲೆಯಲ್ಲಿ ಹೊನ್ನಾಳಿ, ರೋಣ ಹಾಗೂ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರಗಳಿಗೆ ತಲಾ  5 ಆಮ್ಲಜನಕ ಸಾಂದ್ರಕಗಳನ್ನು ನೀಡಿದರು.

ರೋಣ ಶಾಸಕ ಕಳಕಪ್ಪ ಬಂಡಿ ಅವರು ಡಿಸಿಎಂ ಅವರಿಂದ ಆಮ್ಲಜನಕ ಸಾಂದ್ರಕಗಳನ್ನು ಸ್ವೀಕರಿಸಿ ತಮ್ಮ ಕ್ಷೇತ್ರಗಳಿಗೆ ರವಾನಿಸಿದರು.

ಹೊನ್ನಾಳಿ ಕ್ಷೇತ್ರದ ಶಾಸಕರೂ ಆದ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ರೇಣಾಕಾಚಾರ್ಯ ಅವರಿಗೆ ಅವರ ಅನುಪಸ್ಥಿತಿಯಲ್ಲಿ ‌ಐದು ಸಾಂದ್ರಕಗಳನ್ನು ನೀಡಿದರು.

ಬಿಬಿಎಂಪಿ ಮಾಜಿ ಸದಸ್ಯರಾದ ಮುನೇಂದ್ರ ಕುಮಾರ್‌ ಅವರಿಗೆ ಐದು ಸಾಂದ್ರಕಗಳನ್ನು ಕೊಟ್ಟಿದ್ದು ಅವರು ಬ್ಯಾಟರಾಯನಪುರ ಕ್ಷೇತ್ರದಲ್ಲಿ‌ ಬಳಕೆ ಮಾಡಲಿದ್ದಾರೆ.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು, ಸೋಂಕಿತರಿಗೆ ಆಮ್ಲಜನಕ ಸಾಂದ್ರಕಗಳಿಂದ ಹೆಚ್ಚು ಸಹಾಯ ಆಗುತ್ತಿದೆ. ತುರ್ತಾಗಿ ಎಲ್ಲಿಗೆ ಬೇಕಾದರೂ ಕೊಂಡೊಯ್ದು ಸುಲಭವಾಗಿ ಬಳಸಬಹುದಾಗಿದೆ. ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಮನೆ ಬಾಗಿಲಿಗೆ ಇವುಗಳನ್ನು ಒದಗಿಸುವ ಕೆಲಸ ಆಗುತ್ತಿದೆ. ರಾಜ್ಯದ ಇತರ ಕಡೆಗೂ ಹೆಚ್ಚಿನ ಅನುಕೂಲ ಆಗಲಿ ಎಂದು ವೈಯಕ್ತಿಕವಾಗಿ ಇವುಗಳನ್ನು ನೀಡುತ್ತಿರುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next