Advertisement

ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರೊಂದಿಗೆ ಸಿಎಂ ಬಿ ಎಸ್ ವೈ ಸಭೆ

06:32 PM May 03, 2021 | Team Udayavani |

ಬೆಂಗಳೂರು : ಕೋವಿಡ್ ಸೋಂಕು ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.

Advertisement

ಒಂದೆಡೆ ದಿನನಿತ್ಯ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ಕೊರತೆಯ ಬಗ್ಗೆ ತೀವ್ರ ಆರೋಪಗಳು ಕೇಳಿಬರುತ್ತಿದ್ದರೇ, ಇನ್ನೊಂದೆಡೆ ಸರ್ಕಾರ ಎಲ್ಲಾ ಸೌಲಭ್ಯಗಳನ್ನು ಪೂರೈಸಲಾಗುತ್ತಿದೆ ಎಂದು ಸಮರ್ಥಿಸಿಕೊಳ್ಳುತ್ತಿದೆ.

ರಾಜ್ಯದಲ್ಲಿ ಆಕ್ಸಿಜನ್ ಕೊರತೆಯ ಹಿನ್ನೆಲೆಯಲ್ಲಿ, ಆಕ್ಸಿಜನ್ ಲಭ್ಯತೆಯನ್ನು ಹೆಚ್ಚಿಸಿಕೊಳ್ಳಲು ಇಂದು(ಮೇ. 03) ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರೊಂದಿಗೆ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಸಭೆ ನಡಸಿದ್ದಾರೆ.

ಓದಿ : ಆರ್.ಆರ್.ನಗರದ 200 ಸೋಂಕಿತರಿರುವ ಆಸ್ಪತ್ರೆಯಲ್ಲೂ ಆಕ್ಸಿಜನ್ ಸಮಸ್ಯೆ: ಡಿ.ಕೆ.ಸುರೇಶ್

ಸಭೆಯಲ್ಲಿ ಲಭ್ಯವಿರುವ ಟ್ಯಾಂಕರ್ ಗಳನ್ನು ಗರಿಷ್ಠ ಪ್ರಮಾಣದಲ್ಲಿ‌ ಬಳಸಿಕೊಳ್ಳುವ ವಿಚಾರವನ್ನೊಳಗೊಂಡು ಆಕ್ಸಿಜನ್ ಪ್ರಮಾಣ ಹೆಚ್ಚಿಸಿಕೊಳ್ಳುವ ಕುರಿತಾಗಿ ಚರ್ಚಿಸಲಾಯಿತು.

Advertisement

ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ಅಂಶಗಳು

1.ಈಗ ಕೇಂದ್ರ ಸರ್ಕಾರವು ಹಂಚಿಕೆ ಮಾಡಿರುವ ಆಕ್ಸಿಜನ್ ಕೋಟಾದಲ್ಲಿ ಯಾವುದೇ ರೀತಿ ಕಡಿತವಾಗದಂತೆ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದು.

2.ಆಕ್ಸಿಜನ್ ಟ್ಯಾಂಕರ್ ಗಳ ಫಿಲಿಂಗ್ ಅವಧಿಯನ್ನು ಕಡಿತಗೊಳಿಸಲು ಕ್ರಮ ಕೈಗೊಳ್ಳುವುದು.

3.ಆಕ್ಸಿಜನ್ ಟ್ಯಾಂಕರ್ ಗಳು ತಡೆರಹಿತ ಪ್ರಯಾಣಕ್ಕಾಗಿ ಗ್ರಿನ್ ಕಾರಿಡಾರ್ ಗಳನ್ನು ಒದಗಿಸುವುದು.

4.ಟೋಲ್‍ ಗಳಲ್ಲಿ ಅನಗತ್ಯ ವಿಳಂಬ ತಪ್ಪಿಸಲು ಟೋಲ್‍ ಗಳಿಗೆ ನಿರ್ದೇಶನ ನೀಡುವುದು.

5.ನೈಟ್ರೋಜನ್, ಆರ್ಗನ್ ಅನಿಲಗಳ ಸಾಗಣೆ ಟ್ಯಾಂಕರ್ಗಳನ್ನು ಆಕ್ಸಿಜನ್ ಸಾಗಣೆಗೆ ಪರಿವರ್ತಿಸಲು ಕ್ರಮವಹಿಸುವುದು.

6.ತುರ್ತು ಅಗತ್ಯಕ್ಕಾಗಿ ಆಕ್ಸಿಜನ್ ವಾಹನಗಳ ಚಾಲನೆಗಾಗಿ ಎಲ್‍ ಪಿ ಜಿ ಟ್ಯಾಂಕರ್ಗಳ ಚಾಲಕರ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಂಡು ಅಗತ್ಯವಿದ್ದಲ್ಲಿ ಅವರ ಸೇವೆಯನ್ನು ಬಳಸಿಕೊಳ್ಳುವುದು.

7.ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರು ಆಕ್ಸಿಜನ್ ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ನಿಯೋಜಿಸಲ್ಪಟ್ಟ ಅಧಿಕಾರಿಗೆ ಸಂಪರ್ಕಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡು ತಡೆರಹಿತವಾಗಿ ಆಕ್ಸಿಜನ್ ಪೂರೈಕೆ ಮಾಡಲು ಕೋರಲಾಯಿತು.

ಇನ್ನು, ಲಭ್ಯವಿರುವ ಟ್ಯಾಂಕರ್ ಗಳನ್ನು ಗರಿಷ್ಠ ಪ್ರಮಾಣದಲ್ಲಿ‌ ಬಳಸಿಕೊಳ್ಳಲು ಸಭೆಯಲ್ಲಿ ಸೂಚಿಸಲಾಯಿತು.

ಓದಿ : ಕಲಬುರಗಿ: 24 ಗಂಟೆ ಅವಧಿಯಲ್ಲಿ ಓರ್ವ ಕೋವಿಡ್ ಶಂಕಿತ ಸೇರಿ 9 ಸೋಂಕಿತರ ಸಾವು

Advertisement

Udayavani is now on Telegram. Click here to join our channel and stay updated with the latest news.

Next