Advertisement

ಪಿಎಂ ಕೇರ್ ಫಂಡ್ ನಿಂದ ದೇಶದಲ್ಲಿ 551 ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆ : ಮೋದಿ

03:43 PM Apr 25, 2021 | Team Udayavani |

ನವದೆಹಲಿ : ದೇಶದಲ್ಲಿ ವೈದ್ಯಕೀಯ ಆಕ್ಸಿಜನ್ ಕೊರತೆಯನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ಪಿಎಂ ಕೇರ್ ಫಂಡ್‌ ಹಣಕಾಸು ನೆರವಿನಿಂದ ದೇಶದಲ್ಲಿ 551 ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪನೆ ಮಾಡುವುದಾಗಿ ಮೋದಿ ಟ್ವೀಟ್ ಮಾಡಿದ್ದಾರೆ.

Advertisement

ದೇಶದಲ್ಲಿ ಕೋವಿಡ್ 2ನೇ ಅಲೆ ಹೆಚ್ಚು ಜನರ ಪ್ರಾಣವನ್ನು ಬಲಿ ಪಡೆಯುತ್ತಿದೆ. ಇದರಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರ ಸಂಖ್ಯೆಯೂ ಹೆಚ್ಚಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಕೋವಿಡ್ ತಡೆಯಲು ಮತ್ತು ಜನರ ಜೀವ ಉಳಿಸಲು ಸಹಾಯವಾಗಲಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಸಾಕಷ್ಟು ಆಮ್ಲಜನಕದ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಪ್ರತಿ ಜಿಲ್ಲೆಯಲ್ಲಿ ಆಮ್ಲಜನಕ ಉತ್ಪಾಧನಾ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಆಸ್ಪತ್ರೆಗಳಲ್ಲಿ ಆಮ್ಲಜನಕದ ಲಭ್ಯತೆಯನ್ನು ಹೆಚ್ಚಿಸುವ ಮತ್ತು ರಾಷ್ಟ್ರದಾದ್ಯಂತದ ಜನರಿಗೆ ಸಹಾಯ ಮಾಡುವ ನಿರ್ಧಾರ ಇದು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ದೆಹಲಿಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಆಮ್ಲಜನಕವನ್ನು ಒದಗಿಸುವಂತೆ ಕೇಳಿದ್ದವು. ಇಷ್ಟೆ ಅಲ್ಲದೆ ಆಕ್ಸಿಜನ್ ಕೊರೆತೆಯನ್ನು ನಿವಾರಿಸಿ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next