Advertisement
ದೇಶದ ಆಸ್ಪತ್ರೆಗಳಲ್ಲಿ ಆಮ್ಲಜನಕದ ಪೂರೈಕೆ ಯನ್ನು ಸರಾಗಗೊಳಿಸುವ ಕ್ರಮ ಪ್ರಗತಿ ಯಲ್ಲಿದೆ. ಕೊರೊನಾ ಪರಿ ಸ್ಥಿತಿ ಮಾತ್ರವಲ್ಲ, ಅದರ ಅನಂತರದ ದಿನಗಳ ಅಗತ್ಯಕ್ಕೂ ಒದಗುವಂತೆ ವ್ಯವಸ್ಥೆ ಕೈಗೊಳ್ಳಲಾಗುತ್ತದೆ ಎಂದು ಸರಕಾರ ಹೇಳಿದೆ.ಕೊರೊನಾ ನಿಯಂ ತ್ರಣಕ್ಕೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ವೋಚ್ಚ ನ್ಯಾಯಾ ಲಯವು ಪ್ರಶ್ನಿಸಿದ್ದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಈ ಅಫಿದವಿತ್ ಸಲ್ಲಿಸಿದೆ.
ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಲಸಿಕೆಗಳ ಬೆಲೆಯಲ್ಲಿ ವ್ಯತ್ಯಾಸ ಇರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಇದರ ಹಿಂದಿನ ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸುವಂತೆ ಕೇಂದ್ರಕ್ಕೆ ಸೂಚಿಸಿದೆ. ಲಸಿಕೆ ಮತ್ತು ಇತರ ಅಗತ್ಯ ಔಷಧೀಯ ವಸ್ತುಗಳ ದರ ನಿಗದಿಗೆ ಅಳವಡಿಸಿಕೊಂಡ ಆಧಾರ, ತರ್ಕಗಳೇನು? ಇಂಥ ರಾಷ್ಟ್ರೀಯ ಬಿಕ್ಕಟ್ಟಿನಲ್ಲಿ ನಾವು ಮೂಕಪ್ರೇಕ್ಷಕರಾಗಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್‌ನ ಪಾತ್ರ ಈ ವೇಳೆ ನಿರ್ಣಾಯಕ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ರಾಜ್ಯಗಳಿಗೆ ಸೂಚನೆ
18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಗೆ ಸಿದ್ಧತೆ ಹೇಗೆ ನಡೆದಿದೆ ಎಂದು ಪ್ರಶ್ನಿಸಿರುವ ನ್ಯಾಯಪೀಠ, ಲಸಿಕೆ ನೀಡಿಕೆಗೆ ಸಂಬಂಧಿಸಿದ ಮೂಲ ಸೌಕರ್ಯಗಳ ಕುರಿತು ಮಾಹಿತಿ ನೀಡು ವಂತೆ ಎಲ್ಲ ರಾಜ್ಯ ಸರಕಾರಗಳಿಗೆ ನಿರ್ದೇಶಿಸಿದೆ. ಲಸಿಕೆ, ಆಮ್ಲಜನಕ ಕೊರತೆ ಆಗದಂತೆ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಸೂಚಿಸಿದೆ.