Advertisement

ಜಿಲ್ಲೆಗಳಿಗೆ ಆಮ್ಲಜನಕ ಪೂರೈಕೆ: ನೀತಿ ರೂಪಿಸಲು ಆದೇಶ

11:28 PM May 06, 2021 | Team Udayavani |

ಬೆಂಗಳೂರು: ರಾಜ್ಯದ ಜಿಲ್ಲೆಗಳಿಗೆ ಆಮ್ಲಜನಕ ಪೂರೈಕೆಗೆ ಸಂಬಂಧಿಸಿ ಸ್ಪಷ್ಟ ನೀತಿ ಇಲ್ಲದಿರುವುದಕ್ಕೆ ಸರಕಾರವನ್ನು ತರಾಟೆಗೆ ತೆಗೆದು ಕೊಂಡಿರುವ ಹೈಕೋರ್ಟ್‌, ತತ್‌ಕ್ಷಣವೇ ಮಾರ್ಗಸೂಚಿ ರೂಪಿಸುವಂತೆ ಆದೇಶಿಸಿದೆ.

Advertisement

ಕೋವಿಡ್‌-19 ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿ ಸಲ್ಲಿಕೆಯಾ ಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು  ಮುಖ್ಯ ನ್ಯಾ| ಎ.ಎಸ್‌. ಓಕ್‌ ಹಾಗೂ ನ್ಯಾ| ಅರವಿಂದ ಕುಮಾರ್‌ ಅವರಿದ್ದ ವಿಭಾ ಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಚಾಮರಾಜನಗರದಲ್ಲಿ 24 ಸೋಂಕಿತರ ಸಾವಿಗೆ ಸ್ಪಷ್ಟ ಮಾರ್ಗಸೂಚಿ ಇಲ್ಲ ದಿರುವುದೇ ಕಾರಣ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿತು.

ನೂರು ಮೆಟ್ರಿಕ್‌ ಟನ್‌ ಆಮ್ಲಜನಕ :

ಅಡ್ವೊಕೇಟ್‌ ಜನರಲ್‌ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ನ್ಯಾಯಾಲಯದ ನಿರ್ದೇಶನದಂತೆ ಕೇಂದ್ರ ಸರಕಾರ ಬುಧವಾರ 100 ಮೆಟ್ರಿಕ್‌ ಟನ್‌ ಆಮ್ಲಜನಕ ಹಂಚಿಕೆ ಮಾಡಿದ್ದು, ಆ ಪೈಕಿ 60 ಮೆಟ್ರಿಕ್‌ ಟನ್‌ ಬಳ್ಳಾರಿಯಿಂದ ಮತ್ತು 40 ಮೆಟ್ರಿಕ್‌ ಟನ್‌ ಒಡಿಶಾದ ಕಳಿಂಗಾ ನಗರದಿಂದ ಪಡೆಯಲಾಗಿದೆ ಎಂದರು.

Advertisement

ಕೇಂದ್ರ ಸರಕಾರ 28 ಪಿಎಎಸ್‌ ಆಕ್ಸಿಜನ್‌ ಘಟಕಗಳನ್ನು ಮಂಜೂರು ಮಾಡಿದೆ. ಒಂದು ಘಟಕದಿಂದ ಕನಿಷ್ಠ 15 ರಿಂದ 20 ಹಾಸಿಗೆಗಳಿಗೆ ಆಕ್ಸಿಜನ್‌ ಪೂರೈಸಬಹುದು. ರಾಜ್ಯವೂ 40 ಪಿಎಎಸ್‌ಗಳಿಗೆ ಬೇಡಿಕೆ ಸಲ್ಲಿಸಿದೆ. ಒಟ್ಟಾರೆ ಈ ಮಾಸಾಂತ್ಯಕ್ಕೆ 68 ಪಿಎಎಸ್‌ ಆಮ್ಲಜನಕ ಘಟಕಗಳು ಕಾರ್ಯಾರಂಭಿಸಲಿವೆ ಎಂದರು.

ಅಲ್ಲದೆ ಬಹ್ರೈನ್‌ನಿಂದ 20 ಮೆಟ್ರಿಕ್‌ ಟನ್‌ ಮತ್ತು ಐಒಸಿಯಿಂದ 20 ಮೆಟ್ರಿಕ್‌ ಟನ್‌ ಆಮ್ಲಜನಕ ರಾಜ್ಯಕ್ಕೆ ಬರುತ್ತಿದೆ. 5 ಖಾಲಿ ಟ್ಯಾಂಕರ್‌ಗಳನ್ನು ವಿಮಾನದ ಮೂಲಕ ಒಡಿಶಾಗೆ ಕಳುಹಿಸಲಾಗಿದ್ದು, ತಲಾ 74 ಟನ್‌ ಸಾಮರ್ಥ್ಯದ ಈ ಟ್ಯಾಂಕರ್‌ 48 ಗಂಟೆಗಳಲ್ಲಿ ರಾಜ್ಯಕ್ಕೆ ಆಮ್ಲಜನಕವನ್ನು ತರಲಿವೆ. ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ಇಲ್ಲೇ ಬಳಸುವ ಬಗ್ಗೆ ರಾಜ್ಯದ ಸಚಿವರು, ಕೇಂದ್ರ ಸಚಿವರೊಂದಿಗೆ ಸಮಾಲೋಚಿಸಿ ದ್ದಾರೆ ಎಂದು ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next