Advertisement

ಖಾಸಗಿ ವ್ಯಕ್ತಿಗಳಿಗೆ ಆಮ್ಲಜನಕ ಪೂರೈಕೆ ನಿಷಿದ್ಧ

11:00 AM May 17, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಆಮ್ಲಜನಕ ಪೂರೈಕೆ ಮತ್ತುನಿರ್ವಹಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸ ಲಾಗಿದ್ದು, ಅದರಂತೆ ಖಾಸಗಿ ವ್ಯಕ್ತಿಗಳಿಗೆ ಆಮ್ಲಜನಕಪೂರೈಕೆ ಮಾಡುವುದು ನಿಷಿದ್ಧ ಎಂದು ರಾಜ್ಯ ಸರ್ಕಾರಹೈಕೋರ್ಟ್‌ಗೆ ತಿಳಿಸಿದೆ.

Advertisement

ಕೋವಿಡ್‌ ನಿರ್ವಹಣೆಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವಸಾರ್ವಜನಿಕ ಹಿತಾಸಕ್ತಿಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯನ್ಯಾಯಮೂರ್ತಿ ಎ.ಎಸ್‌. ಓಕ್‌ ಅವರ ನೇತೃತ್ವದವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.

ವಿಪತ್ತು ನಿರ್ವಹಣಾ ಕಾಯ್ದೆ- 2005 ಮತ್ತುಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣಕಾಯ್ದೆ-2020ರಡಿ ವೈದ್ಯಕೀಯ ಆಕ್ಸಿಜನ್‌ ನಿರ್ವಹಣೆಗೆಮಾರ್ಗಸೂಚಿ ಹೊರಡಿಸಲಾಗಿದ್ದು, ಅವುಗಳನ್ನುಉಲ್ಲಂ ಸಿದವರಿಗೆ ನಿಯಮದ ಪ್ರಕಾರ ದಂಡನೆಗೊಳ ಪಡಿ ಸಬಹುದಾಗಿದೆ ಎಂದು ಸರ್ಕಾರ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next