Advertisement
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ದೀರ್ಘಕಾಲದ ಶಂಕಿತ ರಹಸ್ಯ ಹೊರಬಿದ್ದಿದೆ. ಬಿಜೆಪಿ ಅಧಿಕೃತವಾಗಿ ಜೆಡಿಎಸ್ ಪಕ್ಷವನ್ನು ಎನ್‌ಡಿಎಗೆ ಸ್ವಾಗತಿಸಿದೆ. ಈ ವರ್ಗಗಳ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡಲು ಮತ್ತು ಸಾಂಪ್ರದಾಯಿಕ ಮೌಲ್ಯಗಳನ್ನು ಬಲಪಡಿಸಲೆಂದೇ ಮೈತ್ರಿ ಮಾಡಿಕೊಂಡಿರುವ ಈ ನಡೆಯನ್ನು ಕರ್ನಾಟಕದ ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಈ ಮೈತ್ರಿಯನ್ನು ಗಮನಿಸಬೇಕು’ ಎಂದಿದ್ದಾರೆ.
ಜೆಡಿ(ಎಸ್) ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಸೇರ್ಪಡೆಗೊಂಡ ನಂತರ ಕರ್ನಾಟಕದಲ್ಲಿ “ಬಿಜೆಪಿಯ ಬಿ ಟೀಮ್” ಅಧಿಕೃತವಾಗಿ ಒಕ್ಕೂಟದ ಭಾಗವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.
Related Articles
Advertisement
ಈ ಮೈತ್ರಿಯು ಲೋಕಸಭೆ ಚುನಾವಣೆಯಲ್ಲಿ ತನ್ನ ಭವಿಷ್ಯಕ್ಕೆ ಉತ್ತೇಜನ ನೀಡುತ್ತದೆ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಬಲಪಡಿಸುತ್ತದೆ ಎಂದು ಬಿಜೆಪಿ ಹೇಳಿದೆ.