Advertisement

PM ಜನಮನ್‌ ಅಭಿಯಾನ ಯಶಸ್ವಿಗೊಳಿಸಿ: ದ.ಕ. ಜಿಲ್ಲಾಧಿಕಾರಿ

11:28 PM Jan 05, 2024 | Team Udayavani |

ಮಂಗಳೂರು: ದುರ್ಬಲ ಬುಡಕಟ್ಟು ಸಮುದಾಯದವರ ಸಾಮಾಜಿಕ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಅಭಿಯಾನ (ಪಿಎಂ ಜನಮನ್‌) ಯೋಜನೆಯಡಿ ಅಭಿವೃದ್ಧಿ ಮಿಷನ್‌ ಪ್ರಾರಂಭಿಸಲಾಗಿದ್ದು, ಇದರ ಯಶಸ್ವಿಗೆ ಎಲ್ಲ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ.

Advertisement

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಎಲ್ಲ ಇಲಾಖೆಗಳು ಪರಿಶಿಷ್ಟ ಪಂಗಡದ ಕೊರಗ ಸಮುದಾಯಕ್ಕೆ ಸಂಬಂಧಿಸಿದ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಹುಡುಕಿ ಯೋಜನೆಯ ಲಾಭವನ್ನು ತಲುಪಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಯೋಜನೆಗಳನ್ನು ಕೊರಗ ಸಮುದಾಯದವರಿಗೆ ಆದ್ಯತೆಯಲ್ಲಿ ನೀಡಬೇಕು. ತಾಲೂಕು ಮಟ್ಟದ ಅಧಿಕಾರಿಗಳು ತಹಶೀಲ್ದಾರ್‌ಗಳೊಂದಿಗೆ ಈ ನಿಟ್ಟಿನಲ್ಲಿ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದಅವರು, ಕೇಂದ್ರ-ರಾಜ್ಯ ಸರಕಾರಗಳು ನೀಡುವ ಎಲ್ಲ ಯೋಜನೆಗಳನ್ನು ಮನೆ-ಮನೆ ಸರ್ವೇ ನಡೆಸಿ, ಕೊರಗ ಸಮುದಾಯಕ್ಕೆ ತಲುಪಿಸಲು ಅವರು ಸೂಚಿಸಿದರು.

ಐಟಿಡಿಪಿ ಅಧಿಕಾರಿ ಶಿವಕುಮಾರ್‌ ಮಾತನಾಡಿ, ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರದ ಅಧಿಕಾರಿಗಳು ಜಿಲ್ಲೆಗೆ ಆಗಮಿಸಿ ಬುಡಕಟ್ಟು ಸಮುದಾ ಯದ ಯೋಜನೆಯ ಅನುಷ್ಠಾನದ ಪರಿಶೀಲನೆ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು, ಫಲಾನುಭವಿ ಆಧಾರಿತ ಸೌಲಭ್ಯಗಳನ್ನು ಸಮಗ್ರವಾಗಿ ಜಾರಿಗೊಳಿ ಸಬೇಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ| ಸಂತೋಷ್‌ ಕುಮಾರ್‌ ಜಿ., ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉಪನಿರ್ದೇಶಕ ಉಸ್ಮಾನ್‌ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next