Advertisement

JP Nadda: ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆ.ಪಿ ನಡ್ಡಾ

11:02 AM Apr 07, 2024 | Team Udayavani |

ಹೊಸದಿಲ್ಲಿ: ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರು ರಾಜ್ಯಸಭಾ ಸದಸ್ಯರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ನಡ್ಡಾ ಅವರನ್ನು ಗುಜರಾತ್‌ ನಿಂದ ಮೇಲ್ಮನೆಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

Advertisement

ಜೆ.ಪಿ ನಡ್ಡಾ ಅವರು ಪ್ರಸ್ತುತ ಬಿಜೆಪಿಯ 11 ನೇ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಈ ಹಿಂದೆ ಹಿಮಾಚಲ ಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿದ್ದರು. ಕಳೆದ ತಿಂಗಳ ಆರಂಭದಲ್ಲಿ ಹಿಮಾಚಲದಿಂದ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನಡ್ಡಾ ರಾಜೀನಾಮೆ ನೀಡಿದ್ದರು ಮತ್ತು ಗುಜರಾತ್‌ನಿಂದ ಮೇಲ್ಮನೆಗೆ ನಾಮಪತ್ರ ಸಲ್ಲಿಸಿದ್ದರು.

ನಡ್ಡಾ ಅವರು ಗುಜರಾತ್‌ ನಿಂದ ರಾಜ್ಯಸಭಾ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದರು. ಈತನ್ಮಧ್ಯೆ, ಬಿಜೆಪಿ ಅಧ್ಯಕ್ಷರಾಗಿ ಅವರ ಅಧಿಕಾರಾವಧಿಯನ್ನು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಜೂನ್ 2024 ರವರೆಗೆ ವಿಸ್ತರಿಸಲಾಗಿದೆ.

ಪಕ್ಷದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ನಡ್ಡಾ ಅವರು ಶನಿವಾರ ಬಿಜೆಪಿಯ ದಿಗ್ಗಜರನ್ನು ಸ್ಮರಿಸಿದರು. ಅವರಿಗೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆಪಿ ನಡ್ಡಾ ಅವರು ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಶುಭ ಹಾರೈಸಿದರು. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವು ಅಭೂತಪೂರ್ವ ಗೆಲುವಿನ ಹಾದಿಯಲ್ಲಿ ಮುನ್ನಡೆಯುತ್ತಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next