ಬೆಳಗಾವಿ: ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ, ಕುಡಚಿ ಶಾಸಕ ಪಿ. ರಾಜೀವ್ ಅವರ ತಾಯಿ ಶಾಂತಮ್ಮ ಪಾಂಡಪ್ಪಾ ಲಮಾಣಿ (75) ಕೋವಿಡ್ ಗೆ ಬಲಿಯಾಗಿದ್ದಾರೆ.
ಕೋವಿಡ್ ಸೋಂಕು ತಗುಲಿ ತೀವ್ರ ಉಸಿರಾಟದ ತೊಂದರೆಯಿಂದಾಗಿ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ ಎಂದು ವರದಿಯಾಗಿದೆ.
ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2.76 ಲಕ್ಷ ಹೊಸ ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, 3,874 ಸಾವು ಸಂಭವಿಸಿದೆ ಎಂದು ಗುರುವಾರ(ಮೇ 20) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ದೇಶದಲ್ಲಿ 24 ಗಂಟೆಗಳಲ್ಲಿ 2,76,070 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 2,57,72,400 ಕೋಟಿಗೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 31, 29,878ರಷ್ಟು ಹೆಚ್ಚಳವಾಗಿದೆ.
ಭಾರತದಲ್ಲಿ ಕೋವಿಡ್ ಎರಡನೇ ಅಲೆ ಹರಡುತ್ತಿದ್ದು, ಈ ಸೋಂಕಿನಿಂದಾಗಿ ಈವರೆಗೆ ಒಟ್ಟು 2,66,207 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿ ಹೇಳಿದೆ.