ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷರಾಗಿ ರಾಜ್ಯ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರನ್ನು ನೇಮಕಗೊಳಿಸಲಾಗಿದೆ.
ಮುಂದಿನ ಐದು ವರ್ಷದ ಅವಧಿಗೆ ಪಿ.ರವಿಕುಮಾರ್ ಆಯೋಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ರವಿಕುಮಾರ್ ಅವರು ಸೇವೆಯಲ್ಲಿ ಇದ್ದಾಗಲೇ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ಅವರು ಆಯೋಗದ ಅಧ್ಯಕ್ಷರ ನೇಮಕ ಸಮಿತಿ ಸದಸ್ಯರೂ ಆಗಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ರವಿಕುಮಾರ್ ನೇಮಕ ಸಮಿತಿಗೆ ನಂತರ ರಾಜೀನಾಮೆ ಸಲ್ಲಿಸಿದ್ದರು.
ಇದನ್ನೂ ಓದಿ:ಮಂಕಿಪಾಕ್ಸ್ ಸೋಂಕು ಭೀತಿ: ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ನಡೆಸಲು ಸರ್ಕಾರದ ಸೂಚನೆ
ಇಂಧನ ಕ್ಷೇತ್ರದಲ್ಲಿ ಅಪಾರವಾದ ಜ್ಞಾನ ಇರುವ ಹಿನ್ನೆಲೆಯಲ್ಲಿ ಅವರ ನೇಮಕವಾಗಿದೆ ಎಂದು ಸರಕಾರದ ಮೂಲಗಳು ತಿಳಿಸಿವೆ.